ಸುಂಟಿಕೊಪ್ಪ, ಅ. 12: ವಿಎಸ್‍ಎಸ್‍ಎನ್ ಬ್ಯಾಂಕಿಗೆ ಸೇರಿದ ಮಳಿಗೆಗಳ ಮುಂಭಾಗದಲ್ಲಿ ಸಾರ್ವಜನಿಕರು ಅಡ್ಡಾದಿಡ್ಡಿ ವಾಹನ ಪಾರ್ಕಿಂಗ್ ಮಾಡುತ್ತಿದ್ದು, ನ್ಯಾಯಬೆಲೆ ಅಂಗಡಿ, ಬ್ಯಾಂಕ್ ಹಾಗೂ ಅಕ್ಕಪಕ್ಕದ ಮಳಿಗೆಗಳಿಗೆ ಬರುವ ಗ್ರಾಹಕರಿಗೆ ಸಮಸ್ಯೆ ಉಂಟಾಗಿದೆ.

ಬಸ್ ನಿಲ್ದಾಣದ ಸಮೀಪದಲ್ಲಿರುವ ವಿಎಸ್‍ಎಸ್‍ಎನ್ ಬ್ಯಾಂಕಿನ ಬಳಿಯಲ್ಲಿ ನೂತನ ವಾಣಿಜ್ಯ ಮಳಿಗೆ ನ್ಯಾಯಬೆಲೆ ಅಂಗಡಿ ಸೇರಿದಂತೆ ಡಿಸಿಸಿ, ಕರ್ನಾಟಕ ಗ್ರಾಮೀಣ ಬ್ಯಾಂಕು ಬೇರೆ ಬೇರೆ ಅಂಗಡಿಗಳು ಇವೆ. ನಿತ್ಯ ನೂರಾರು ಸಂಖ್ಯೆಯಲ್ಲಿ ಗ್ರಾಹಕರು ಸೇರಿದಂತೆ ಸಾರ್ವಜನಿಕರು ಬರುತ್ತಾರೆ. ಅಡ್ಡಾದಿಡ್ಡಿ ತಮ್ಮ ವಾಹನಗಳನ್ನು ನಿಲ್ಲಿಸುತ್ತಿರುವುದರಿಂದ ಉಳಿದ ವಾಹನ ಚಾಲಕರಿಗೆ, ಹಾಗೂ ನ್ಯಾಯಬೆಲೆ ಅಂಗಡಿಗೆ ಬರುವ ಜನರಿಗೆ ಕಿರಿಕಿರಿ ಉಂಟಾಗಿದೆ.

ಈ ಬಗ್ಗೆ ವಿಎಸ್‍ಎಸ್‍ಎನ್ ಆಡಳಿತ ಮಂಡಳಿ ಸೂಕ್ತ ವ್ಯವಸ್ಥೆ ಕೈಗೊಳ್ಳಲಿ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.