ಪೆÇನ್ನಂಪೇಟೆ, ಅ. 13: ತಾ. 12 ರಂದು ಪೆÇನ್ನಂಪೇಟೆ ಬಸ್ ನಿಲ್ದಾಣದಲ್ಲಿ ಅನಾರೋಗ್ಯದಿಂದ ಬಳಲುತಿದ್ದ ಅಪರಿಚಿತ ವೃದ್ಧರೊಬ್ಬರನ್ನು ಪೆÇನ್ನಂಪೇಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮೂಕಳೇರ ಸುಮಿತ ಗಣೇಶ್, ಉಪಾಧ್ಯಕ್ಷೆ ಮಂಜುಳ ಹಾಗೂ ಪಿಡಿಓ ಪುಟ್ಟರಾಜು ಆ್ಯಂಬ್ಯುಲೆನ್ಸ್ನಲ್ಲಿ ಮಡಿಕೇರಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದರು. ಪೆÇನ್ನಂಪೇಟೆ ಯುವ ಶಕ್ತಿ ಯುವಕ ಸಂಘದ ಅಧ್ಯಕ್ಷ ರಾಮಕೃಷ್ಣ ವೃದ್ಧನ ಜೊತೆ ತೆರಳಿ ಆಸ್ಪತ್ರೆಗೆ ದಾಖಲಿಸಿದ್ದರು.
ಆದರೆ, ಆಸ್ಪತ್ರೆ ಸೇರಿದ 2 ತಿಂಗಳ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ವೃದ್ಧ ಮೃತಪಟ್ಟ ಹಿನ್ನೆಲೆಯಲ್ಲಿ ಪೆÇನ್ನಂಪೇಟೆ ಗ್ರಾಮ ಪಂಚಾಯಿತಿ, ಪೆÇನ್ನಂಪೇಟೆ ಪೆÇಲೀಸ್ ಠಾಣೆ ಅಧಿಕಾರಿಗಳು ಹಾಗೂ ಕೆಲವು ಸ್ನೇಹಿತರ ಸಹಕಾರದಿಂದ ಯುವ ಶಕ್ತಿ ಯುವಕ ಸಂಘದ ಅಧ್ಯಕ್ಷ ರಾಮಕೃಷ್ಣ ಅವರು ತಾವೇ ಮುಂದೆ ನಿಂತು ವೃದ್ಧನ ಅಂತ್ಯಕ್ರಿಯೆ ನೆರವೇರಿಸಿದರು.