ಮಡಿಕೇರಿ, ಅ. 14: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ವಕೀಲರ ಸಂಘ ಇವುಗಳ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಯೋಜನೆ ‘ಬಡತನ ನಿರ್ಮೂಲನೆ ಪರಿಣಾಮಕಾರಿ ಯೋಜನೆ’ - 2015ರ ಬಗ್ಗೆ ಮಾಹಿತಿ ಕಾರ್ಯಾಗಾರ ತಾ. 15 ರಂದು (ಇಂದು) ಬೆಳಿಗ್ಗೆ 10.30 ಗಂಟೆಗೆ ನ್ಯಾಯಾಲಯ ಆವರಣದಲ್ಲಿ ನಡೆಯಲಿದೆ.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಉದ್ಘಾಟಿಸುವರು. ವಕೀಲರ ಸಂಘದ ಅಧ್ಯಕ್ಷ ಕೆ.ಎಸ್. ಕವನ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ವಿವಿಧ ನ್ಯಾಯಾಧೀಶರುಗಳು ಭಾಗವಹಿಸುವರು.