ವೀರಾಜಪೇಟೆ, ಅ. 15: ವೀರಾಜಪೇಟೆ ನಗರದಲ್ಲಿ ವೆಲ್‍ಫೇರ್ ಪಾರ್ಟಿ ಆಫ್ ಇಂಡಿಯಾದ ನೂತನ ಜಿಲ್ಲಾ ಕಚೇರಿಯನ್ನು ರಾಜ್ಯ ವೆಲ್‍ಫೇರ್ ಪಾರ್ಟಿ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ತಾಹೀರ್ ಹುಸೇನ್ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಈಗಿರುವ ರಾಜ್ಯದ ಮತ್ತು ಕೇಂದ್ರ ಸರಕಾರವು ಕಾರ್ಮಿಕರ ಮತ್ತು ರೈತರ ಜೀವನದ ಜೊತೆಯಲ್ಲಿ ಚೆಲ್ಲಾಟವಾಡುತ್ತಿದೆ ಎಂದರು.
ಎಫ್‍ಐಟಿಯುನ ರಾಜ್ಯ ಅಧ್ಯಕ್ಷ ಅಬ್ದುಲ್ ಸಲಾಂ ಮಾತನಾಡಿ, ಮುಂದಿನ ದಿನಗಳಲ್ಲಿ ಈ ಸರಕಾರವು ನಮ್ಮ ದೇಶದ ಪ್ರಮುಖ ಸಂಸ್ಥೆಗಳನ್ನು ಖಾಸಗಿ ವ್ಯಕ್ತಿಗಳಿಗೆ ಮಾರಾಟ ಮಾಡಲು ಹೊರಟಿದೆ. ಕಾರ್ಮಿಕ ವಿರೋಧಿ ಕಾನೂನನ್ನು ಜಾರಿಗೆ ತಂದು ರೈತರ ಮತ್ತು ಕಾರ್ಮಿಕರ ಜೀವನದ ಬಗ್ಗೆ ಯಾವುದೇ ಕಾಳಜಿಯಿಲ್ಲದೆ ಒಂದು ರೀತಿಯಲ್ಲಿ ಸರ್ವಾಧಿಕಾರಿ ಧೋರಣೆಯನ್ನು ಅನುಸರಿಸುತ್ತಿದೆ ಎಂದರು.
ನೂತನವಾಗಿ ಪಕ್ಷವನ್ನು ಈ ಸಂದರ್ಭ ದಲಿತ ವಿದ್ಯಾರ್ಥಿ ಒಕ್ಕೂಟದ ಜಿಲ್ಲಾ ಕಾರ್ಯದರ್ಶಿ ಸುರೇಶ್ ಸೇರಿದರು.
ಕಚೇರಿಯಲ್ಲಿ ನಾಗರಿಕ ಸೇವಾ ಕೇಂದ್ರವನ್ನು ಪಟ್ಟಣ ಪಂಚಾಯಿತಿ ಸದಸ್ಯ ರಜನಿಕಾಂತ್ ಉದ್ಘಾಟಿಸಿದರು. ಜಿಲ್ಲಾ ಅಧ್ಯಕ್ಷ ಕೆ.ಟಿ. ಬಷೀರ್ ಅಧ್ಯಕ್ಷತೆ ವಹಿಸಿ ಮಾತನಾಡಿ ತÀಮ್ಮ ಪಕ್ಷ ಎಲ್ಲಾ ಜಾತಿ ಜನರನ್ನು ಹೊಂದಿರುವ ಪಕ್ಷವೆಂದರು.