ಸೋಮವಾರಪೇಟೆ, ಅ. 15: ಚೆನೈನ ಅಮತಾ ಟೀಚರ್ಸ್ ಅಸೋಸಿಯೇಶನ್ ವತಿಯಿಂದ ಗಾಂಧಿಜಯಂತಿ ಅಂಗವಾಗಿ ನಡೆದ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ವಿಜೇತರಾದ ಸೋಮವಾರಪೇಟೆಯ ಅಬಾಕಸ್ ಅಕಾಡೆಮಿಯ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಕಾರ್ಯಕ್ರಮ ಇಲ್ಲಿನ ಕಸಾಪ ಭವನದಲ್ಲಿ ನಡೆಯಿತು.
ಸ್ಪರ್ಧೆಯಲ್ಲಿ ಜಯಗಳಿಸಿದ 14 ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದ ತಾ.ಪಂ. ಉಪಾಧ್ಯಕ್ಷ ಎಂ.ಬಿ. ಅಭಿಮನ್ಯುಕುಮಾರ್, ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿದರೆ ಅವರು ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯವಾಗುತ್ತದೆ ಎಂದರು.
ಅಬಕಾಸ್ ಶಿಕ್ಷಣವು ಮಕ್ಕಳ ಬುದ್ದಿಮತ್ತೆಯನ್ನು ಹೆಚ್ಚಿಸಲು ಸಹಕಾರಿಯಾಗುತ್ತದೆ. ಕೊರೊನಾ ಸಂಕಷ್ಟ ಕಾಲದಲ್ಲಿ ಶಿಕ್ಷಣದೊಂದಿಗೆ ಇಂತಹ ಸ್ಪರ್ಧೆಗಳೂ ಆನ್ಲೈನ್ ಮೂಲಕ ನಡೆಯುತ್ತಿರುವದು ಶ್ಲಾಘನೀಯ. ಪೋಷಕರು ತಮ್ಮ ಜಾಗ್ರತೆಯೊಂದಿಗೆ ಮಕ್ಕಳ ಆರೋಗ್ಯದ ಬಗ್ಗೆಯೂ ಜಾಗೃತರಾಗಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಮಹೇಶ್, ಅಬಾಕಸ್ ಅಕಾಡೆಮಿಯ ಮುಖ್ಯಸ್ಥೆ ಸುಕನ್ಯ ಹೆಗ್ಡೆ ಉಪಸ್ಥಿತರಿದ್ದರು.