ಗೋಣಿಕೊಪ್ಪಲು, ಅ. 15: ಗೋಣಿಕೊಪ್ಪಲುವಿನ ಸ್ವಾತಂತ್ರ್ಯ ಹೋರಾಟಗಾರರ ಭವನದಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್ ಅಧ್ಯಕ್ಷತೆಯಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಸಭೆ ನಡೆಯಿತು. ವಿವಿಧ ಘಟಕಗಳ ಪದಾಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಮಂಜುನಾಥ್‍ಕುಮಾರ್, ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಗ್ರಾಮ ಪಂಚಾಯಿತಿ ಚುನಾವಣೆಯನ್ನು ಹಗುರವಾಗಿ ಪರಿಗಣಿಸಂತೆ ಹೇಳಿದರು. ಪ್ರತಿ ವಾರ್ಡಿನಲ್ಲಿ ಅರ್ಹ ಅಭ್ಯರ್ಥಿಗಳ ಆಯ್ಕೆಯ ಪಟ್ಟಿಯು ಅಂತಿಮವಾಗಬೇಕು, ಚುನಾಯಿತ ಪ್ರತಿನಿಧಿಗಳು ಹಾಗೂ ಪಕ್ಷದ ಮುಖಂಡರು ಈ ನಿಟ್ಟಿನಲ್ಲಿ ಕೂಡಲೇ ಕ್ರಮ ವಹಿಸಬೇಕು ಎಂದು ಕರೆ ನೀಡಿದರು.

ಬ್ಲಾಕ್ ಕಾಂಗ್ರೆಸ್‍ನ ಅಧ್ಯಕ್ಷ ಮೀದೇರಿರ ನವೀನ್ ಪ್ರಾಸ್ತವಿಕವಾಗಿ ಮಾತನಾಡಿ, ಪೊನ್ನಂಪೇಟೆ ಬ್ಲಾಕ್‍ನಲ್ಲಿ ಪಕ್ಷ ಸಂಘಟನೆ ಉತ್ತಮವಾಗಿದ್ದು, 16 ಘಟಕಗಳು ತಮ್ಮ ಕಾರ್ಯಚಟುವಟಿಕೆಯನ್ನು ಚುರುಕುಗೊಳಿಸಿವೆ. ಸಣ್ಣಪುಟ್ಟ ವ್ಯತ್ಯಾಸಗಳನ್ನು ಸರಿಪಡಿಸಲಾಗಿದೆ. ಜಿಲ್ಲಾ ಕಾಂಗ್ರೆಸ್‍ನಿಂದ ಬರುವ ಆದೇಶಗಳನ್ನು ಚಾಚೂತಪ್ಪದೆ ಪಾಲಿಸಲಾಗಿದೆ. ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದರು.

ವಿಧಾನ ಪರಿಷತ್ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ಮಾತನಾಡಿ, ಗ್ರಾಮ ಪಂಚಾಯಿತಿ ಚುನಾವಣೆಯ ನಂತರ ಎಲ್ಲಾ ಚುನಾವಣೆಗಳು ಆರಂಭವಾಗಲಿದೆ. ಪಕ್ಷದ ಎಲ್ಲಾ ಘಟಕಗಳು ಸಕ್ರೀಯವಾಗಿ ಕಾರ್ಯ ನಿರ್ವಹಿಸಬೇಕು. ಸುಳ್ಳನ್ನೆ ಸತ್ಯವೆಂದು ಪ್ರತಿಪಾದಿಸುವುದು ಬಿ.ಜೆ.ಪಿ.ಯವರಿಗೆ ಕರಗತವಾಗಿದೆ. ಆದ್ದರಿಂದ ಕಾರ್ಯಕರ್ತರು ಎಚ್ಚರಿಕೆಯಿಂದ ಚುನಾವಣೆಯನ್ನು ಎದುರಿಸಬೇಕೆಂದರು.

ಕೊಡಗು ಜಿಲ್ಲಾ ಕಾಂಗ್ರೆಸ್‍ನ ಉಸ್ತುವಾರಿ ವಹಿಸಿರುವ ಕೆಪಿಸಿಸಿಯ ಕಾರ್ಯದರ್ಶಿ ಶಾಹಿದ್ ಮಾತನಾಡಿ, ಕಾಂಗ್ರೆಸ್‍ನ ಮತದಾರರ ಮನೆ ಮನೆಗಳಿಗೆ ತೆರಳಿ ಪಕ್ಷದ ಕಾರ್ಯಕ್ರಮಗಳನ್ನು ಜನತೆಗೆ ಮನವರಿಕೆ ಮಾಡಿಕೊಡಬೇಕು ಹಾಗೂ ಬಿಜೆಪಿ ಸರ್ಕಾರದಲ್ಲಿ ಆಗುತ್ತಿರುವ ಭ್ರಷ್ಟಚಾರದ ಬಗ್ಗೆ ವಿವರಣೆ ನೀಡಬೇಕು. ಪಂಚಾಯಿತಿ ಮಟ್ಟದಲ್ಲಿ ಅರ್ಹರನ್ನು ಗುರುತಿಸಿ ಪಕ್ಷದ ಅಭ್ಯರ್ಥಿಗಳಾಗಿ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಮುಕ್ಕಾಟಿರ ಶಿವು ಮಾದಪ್ಪ, ಪರಿಶಿಷ್ಟ ವರ್ಗದ ಜಿಲ್ಲಾಧ್ಯಕ್ಷ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯೆ ಪಿ.ಆರ್. ಪಂಕಜ ಮಾತನಾಡಿದರು. ಸಭೆಯಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್‍ನ ಮಾಜಿ ಮಹಿಳಾ ಅಧ್ಯಕ್ಷೆ ಕಡೇಮಾಡ ಕುಸುಮ ಜೋಯಪ್ಪ, ಗೋಣಿಕೊಪ್ಪ ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್ ಗಣಪತಿ, ಡಿಸಿಸಿ ಉಪಾಧ್ಯಕ್ಷ ಪೆಮ್ಮಂಡ ಪೊನ್ನಪ್ಪ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಮೂಕಳೇರ ಕುಶಾಲಪ್ಪ, ಮಾಜಿ ತಾಲೂಕು ಪಂಚಾಯಿತಿ ಸದಸ್ಯರಾದ ಆಪಟ್ಟೀರ ಟಾಟೂ ಮೊಣ್ಣಪ್ಪ, ಕೊಲ್ಲೀರ ಬೋಪಣ್ಣ, ಸೇವಾದಳದ ತಾಲೂಕು ಅಧ್ಯಕ್ಷೆ ತೆರೆಸಾ ವಿಕ್ಟರ್ ತಮ್ಮ ಅಭಿಪ್ರಾಯಗಳನ್ನು ಸಭೆಯ ಮುಂದಿಟ್ಟರು. ವೇದಿಕೆಯಲ್ಲಿ ಮಾಜಿ ಎಂಎಲ್‍ಸಿ ಅರುಣ್ ಮಾಚಯ್ಯ, ಯುವ ಕಾಂಗ್ರೆಸ್ ಅಧ್ಯಕ್ಷ ಜೆ.ಕೆ. ಸೋಮಣ್ಣ, ಕೊಣಿಯಂಡ ಮುತ್ತಣ್ಣ, ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಕೊರಕುಟ್ಟೀರ ಸರ ಚಂಗಪ್ಪ, ತೀತಿರ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಬಾಲಕೃಷ್ಣ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಆಲೀರ ರಶೀದ್ ಉಪಸ್ಥಿತರಿದ್ದರು.

ಜಿ.ಪಂ. ಸದಸ್ಯರಾದ ಬಿ.ಎನ್. ಪ್ರಥ್ವಿ, ಕೇಚಮಾಡ ಸರಿತಾ ಪೂಣಚ್ಚ, ತಾ.ಪಂ. ಸದಸ್ಯರಾದ ಮೂಕಳೇರ ಆಶಾ, ಪಕ್ಷದ ಮುಖಂಡರಾದ ಕಾಡ್ಯಮಾಡ ಬೋಪಣ್ಣ, ಕರ್ಣರಾಜ್ ತಂಬಿ, ಎಂ. ಮಂಜುಳ, ಆಶಾ ಜೇಮ್ಸ್, ವಿನಯ್ ಕುಮಾರ್, ಹೆಚ್. ಶಿವಣ್ಣ, ಮಣಿಕುಂಞ, ವಿ.ಪಿ. ರಾಜ, ಮುಕ್ಕಾಟಿರ ಸಂದೀಪ್, ಕೊಲ್ಲೀರ ಬೋಪಣ್ಣ, ಕಾರ್ಯದರ್ಶಿ ಎ.ಜೆ. ಬಾಬು, ಹುಮಾಯೂನ್ ಪಾಷ, ಅಬ್ದುಲ್ ಸಮ್ಮದ್, ಕೆ.ಪಿ. ಜಲೀಲ್, ನಾಮೇರ ಅಂಕಿತ್ ಪೊನ್ನಪ್ಪ, ಶಮೀರ್ ಸೇರಿದಂತೆ ಮುಂತಾದ ಪ್ರಮುಖರು ಭಾಗವಹಿಸಿದ್ದರು. ಆಶಾ ಜೇಮ್ಸ್ ಪ್ರಾರ್ಥಿಸಿ, ಕಾರ್ಯದರ್ಶಿ ಬಾಲಕೃಷ್ಣ ಸ್ವಾಗತಿಸಿ, ವಂದಿಸಿದರು.