ಮಡಿಕೇರಿ, ಅ. 15: ಮಕ್ಕಳ ರಕ್ಷಣೆಯ ವಿವಿಧ ಇಲಾಖೆಗಳ ಅಧಿಕಾರಿಗಳು ಜನರಲ್ಲಿ ಜಾಗೃತಿ ಮೂಡಿಸಿ ಭಿತ್ತಿಪತ್ರ ಹಾಗೂ ಕರಪತ್ರಗಳನ್ನು ವಿತರಣೆ ಮಾಡಿದರು.

ಮಡಿಕೇರಿ ತಾಲೂಕಿನ ಚೇರಂಬಾಣೆ ಹಾಗೂ ಚೆಟ್ಟಿಮಾನಿ ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿಯ ಕಾಫಿತೋಟ ಹಾಗೂ ವಿವಿಧ ಸಂಸ್ಥೆಗಳಲ್ಲಿ ಬಾಲ್ಯಾವಸ್ಥೆಯ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ಕಾಯ್ದೆಯಡಿ ತಪಾಸಣೆ ನಡೆಸಲಾಯಿತು. ಈ ಸಂದರ್ಭ ವಿವಿಧ ಸಂಸ್ಥೆಗಳ ಮಾಲೀಕರಿಗೆ ಕಾಯ್ದೆಯ ಬಗ್ಗೆ ಮಾಹಿತಿಯನ್ನು ಒಳಗೊಂಡಿರುವ ಕರಪತ್ರಗಳನ್ನು ಹಾಗೂ ಭಿತ್ತಿಪತ್ರಗಳನ್ನು ವಿತರಿಸುವ ಮೂಲಕ ಮಕ್ಕಳನ್ನು ಯಾವುದೇ ಕೆಲಸಗಳಿಗೆ ನೇಮಕ ಮಾಡಿಕೊಳ್ಳದಂತೆ ಎಚ್ಚರಿಸಲಾಯಿತು.

ಈ ಸಂದರ್ಭ ಕಾರ್ಮಿಕ ಇಲಾಖೆಯ ಹಿರಿಯ ನಿರೀಕ್ಷಕ ಎಂ.ಎಂ. ಯತ್ನಟಿ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ನಿರ್ದೇಶಕ ಆರ್. ಸಿರಾಜ್ ಅಹ್ಮದ್, ಜಿಲ್ಲಾ ವಿಶೇಷ ಮಕ್ಕಳ ಪೊಲೀಸ್ ಘಟಕದ ಅಧಿಕಾರಿಗಳಾದ ಸುಮತಿ, ಮಹೇಶ್, ಮಕ್ಕಳ ಸಹಾಯವಾಣಿ ತಂಡದ ಸದಸ್ಯ ಪ್ರವೀಣ್‍ಕುಮಾರ್, ಮಕ್ಕಳ ರಕ್ಷಣಾ ಘಟಕದ ಕ್ಷೇತ್ರ ಕಾರ್ಯಕರ್ತ ಕಿರಣ್ ಸೇರಿದಂತೆ ಮತ್ತಿತರರು ಇದ್ದರು.