ಸೋಮವಾರಪೇಟೆ, ಅ. 15: ಕೊರೊನಾ ಸೋಂಕು ಉಲ್ಬಣವಾಗುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮದ ಅಂಗವಾಗಿ, ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಅವರು ಸೋಮವಾರಪೇಟೆ ಪಟ್ಟಣದಲ್ಲಿ ಸಾರ್ವಜನಿಕರಿಗೆ ಉಚಿತ ಮಾಸ್ಕ್‍ಗಳನ್ನು ವಿತರಿಸಿದರು.

ಪಟ್ಟಣದ ಸಿ.ಕೆ. ಸುಬ್ಬಯ್ಯ ರಸ್ತೆ, ಖಾಸಗಿ ಬಸ್ ನಿಲ್ದಾಣ, ಜೇಸೀ ವೇದಿಕೆ ಸುತ್ತಮುತ್ತಲಲ್ಲಿದ್ದ ಸಾರ್ವಜನಿಕರಿಗೆ ಉಚಿತವಾಗಿ ಮಾಸ್ಕ್‍ಗಳನ್ನು ವಿತರಿಸಲಾಯಿತು.

ಸಾರ್ವಜನಿಕ ಸ್ಥಳದಲ್ಲಿ ಪ್ರತಿಯೋರ್ವರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಕಾಟಾಚಾರಕ್ಕೆ ಮಾಸ್ಕ್ ಧರಿಸದೇ ಸರಿಯಾಗಿ ಮೂಗು-ಬಾಯಿ ಮುಚ್ಚುವಂತೆ ಮಾಸ್ಕ್ ಧರಿಸಿ, ವೈರಸ್ ಹರಡದಂತೆ ನೋಡಿಕೊಳ್ಳಬೇಕು ಎಂದು ರಂಜನ್ ಕಿವಿಮಾತು ಹೇಳಿದರು.

ಈ ಸಂದರ್ಭ ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ತಾ.ಪಂ. ಸದಸ್ಯರಾದ ತಂಗಮ್ಮ, ಧರ್ಮಪ್ಪ, ಬಿಜೆಪಿ ತಾಲೂಕು ಅಧ್ಯಕ್ಷ ಮನುಕುಮಾರ್ ರೈ, ಪ.ಪಂ. ಸದಸ್ಯರಾದ ಮಹೇಶ್, ಪಿ.ಕೆ. ಚಂದ್ರು, ನಳಿನಿ ಗಣೇಶ್, ಮಾಜೀ ಅಧ್ಯಕ್ಷೆ ಲೀಲಾ ನಿರ್ವಾಣಿ, ಗ್ರಾ.ಪಂ. ಮಾಜೀ ಸದಸ್ಯೆ ಮಂಜುಳಾ ಸುಬ್ರಮಣಿ ಸೇರಿದಂತೆ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.