ಮಡಿಕೇರಿ, ಅ. 15: ಪ್ರಸಕ್ತ ಸಾಲಿನಲ್ಲಿ ಅಲೆಮಾರಿ/ ಅರೆ ಅಲೆ ಮಾರಿ ಜನಾಂಗಕ್ಕೆ ಸೇರಿದ ಬೈರಾಗಿ (ಬಾವ), ಬಲ ಸಂತೋಷಿ-ಜೋಷಿ, ಬಾಜಿಗರ್, ಭರಡಿ, ಬುಡಬುಡಕಿ-ಜೋಷಿ-ಗೋಂಧಳಿ, ಚಾರ, ಚಿತ್ರಕಥಿ-ಜೋಷಿ, ಧೋಲಿ, ಢವೇರಿ, ದೊಂಬರಿ, ಘಿಸಾಡಿ, ಗರುಡಿ, ಗೋಪಾಲ್, ಗೊಂದಳಿ, ಹೆಳವ, ಜೋಗಿ, ಕೇಲ್ಕರಿ, ಕೋಲ್ಹಟಿ, ನಂದಿ ವಾಲ-ಜೋಷಿ-ಗೊಂದಳಿ, ಪುಲ್‍ಲಾಲ್ಲಿ, ನಾಥಪಂಥಿ-ಡೌರಿ-ಗೋಸಾವಿ, ನಿರ್ಶಿಕಾರಿ, ಪಾಂಗ್ಯ ಯಲ್, ಜೋಷಿ (ಸಾದ ಜೋಷಿ), ಸಾನ್ಸಿಯ, ಸರಾನಿಯ, ತಿಮಲಿ, ವಾಯ್ಡು, ವಾಸುದೇವ್, ವಾಡಿ, ವಾಗ್ರಿ, ವಿರ್, ಬಜನಿಯ, ಶಿಕ್ಕಲಿಗರ್, ಗೊಲ್ಲ, ಕಿಲ್ಲಿಕ್ಯಾತಸ್, ಸರೋಡಿ, ದುರ್ಗ-ಮುರ್ಗ (ಬುರ್‍ಬುರ್‍ಚ), ಹಾವ ಗಾರ್ (ಹಾವಾಡಿಗಾರ್), ಪುಚ ಗುಂಟಲ, ಮಸಣಿಯ ಯೋಗಿ, (ಬೆಸ್ತರ್), ಬುಂಡಬೆಸ್ತ, ಕಟಬು, ದರ್ವೇಶ್, ಕಾಶಿ ಕಪಾಡಿ, ದೊಂಬಿದಾಸ ಮತ್ತು ಬೈಲ್ ಪತ್ತರ್ ಜನರ ಆರ್ಥಿಕ ಅಭಿವೃದ್ಧಿಗಾಗಿ ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಸಹಾಯ ಗುಂಪುಗಳ ಮೂಲಕ ಸಾಲ ಮತ್ತು ಸಹಾಯಧನ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಭೂಖರೀಧಿ ಯೋಜನೆ ಮತ್ತು ಬ್ಯಾಂಕ್‍ಗಳ ಸಹಯೋಗ ದೊಂದಿಗೆ ಸಾಲ ಮತ್ತು ಸಹಾಯ ಧನದ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಇಚ್ಛಿಸುವವರು ಉಚಿತವಾಗಿ ಅರ್ಜಿ ನಮೂನೆಯನ್ನು ಜಿಲ್ಲಾ ಕಚೇರಿಗಳಲ್ಲಿ ಅಥವಾ ನಿಗಮದ ವೆಬ್‍ಸೈಟ್‍ನಲ್ಲಿ ಪಡೆದು ಅರ್ಜಿ ಯೊಂದಿಗೆ ಜಾತಿ, ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮತ್ತು ಫೋಟೋ ಮತ್ತು ವಿದ್ಯಾರ್ಥಿಗಳ ವ್ಯಾಸಂಗದ ದಾಖಲಾತಿಗಳು, ಗಂಗಾ ಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿದಾರರು ಹೊಂದಿರುವ ಜಮೀನಿನ ದಾಖಲಾತಿಗಳು, ಸಣ್ಣ ಮತ್ತು ಅತಿ ಸಣ್ಣ ರೈತರ ಪ್ರಮಾಣ ಪತ್ರಗಳನ್ನು ಮತ್ತು ಭೂಖರೀಧಿಗೆ ಸಂಬಂಧಿಸಿ ದಂತೆ ಜಮೀನುದಾರರ ಕಂದಾಯ ದಾಖಲೆಗಳು ನಿಗಮದ ವೆಬ್‍ಸೈಟ್ WWW.ಜbಛಿಜಛಿ.ಞಚಿಡಿಟಿಚಿಣಚಿಞಚಿ. gov.iಟಿ ಮೂಲಕ ಆನ್‍ಲೈನ್‍ನಲ್ಲಿ ಅಥವಾ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಸಾಧ್ಯ ವಾಗದೇ ಇದ್ದಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ದಾಖಲಾತಿಗಳೊಡನೆ ಜಿಲ್ಲೆಯ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ತಾ. 29 ರೊಳಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯನ್ನು ಅಥವಾ ದೂ. 08272-221656 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದೆಂದು ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.