ಕೂಡಿಗೆ, ಅ. 15: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವೇಶ್ವರ ಬಡಾವಣೆಯ ರಸ್ತೆ ಮತ್ತು ಚರಂಡಿಯ ಕಾಮಗಾರಿ ಮರು ಆರಂಭಗೊಂಡಿದೆ. ಕಳೆದ ಆರು ತಿಂಗಳ ಹಿಂದೆ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಭೂಮಿಪೂಜೆಯನ್ನು ನೆರವೇರಿಸಿದ್ದರು.

ಗುತ್ತಿಗೆ ಪಡೆದ ಗುತ್ತಿಗೆದಾರ ಕೊರೊನಾ ಲಾಕ್‍ಡೌನ್ ಹಿನ್ನೆಲೆ ಕಾಮಗಾರಿಯನ್ನು ಸ್ಥಗಿತಗೊಳಿಸಿದ್ದರು. ಇದೀಗ ಶಾಸಕರ ಸೂಚನೆಯ ಮೇರೆಗೆ ಅಲ್ಲಿನ ಗ್ರಾಮಸ್ಥರಿಗೆ ಅನುಕೂಲವಾಗುವಂತೆ ಮತ್ತು ಮಳೆಯ ನೀರು ಸರಾಗವಾಗಿ ಹರಿಯಲು ಚರಂಡಿ ವ್ಯವಸ್ಥೆಯನ್ನು ಮಾಡಲು ಕಾಮಗಾರಿ ಪ್ರಾರಂಭವಾಗಿದೆ.