ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮಡಿಕೇರಿ, ಡಿ. 14: ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆÉಯು ಪಕ್ಷರಹಿತ ಚುನಾವಣೆಯಾಗಿರುತ್ತದೆ. ರಾಜಕೀಯ ಪಕ್ಷಗಳು ಸಭೆ, ಸಮಾರಂಭಗಳನ್ನು ಏರ್ಪಡಿಸಿ ವೇದಿಕೆಯ ಮೇಲೆ ಪಕ್ಷದ ಬಾವುಟ, ಬ್ಯಾನರ್ಗಳನ್ನು ಬಳಸುವಂತಿಲ್ಲ.ಸ್ಪರ್ಧಿಸುವ ಅಭ್ಯರ್ಥಿಗಳನ್ನು ತಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿ ಎಂದು ಪರಿಚಯಿಸುವುದು ಹಾಗೂ ಅವರ ಪರವಾಗಿ ಮತ ನೀಡಲು ಮತದಾರರನ್ನು ಕೋರುವಂತಿಲ್ಲ. ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು, ರಾಜಕೀಯ ಮುಖಂಡರ ಭಾವಚಿತ್ರ, ಪಕ್ಷದ ಚಿಹ್ನೆ ಇರುವ ಕರಪತ್ರಗಳನ್ನು ಮುದ್ರಿಸುವುದು, ಹಂಚುವುದು ಮಾಡುವಂತಿಲ್ಲ.(ಮೊದಲ ಪುಟದಿಂದ) ರಾಜಕೀಯ ಮುಖಂಡರ ಭಾವಚಿತ್ರ ರಾಜಕೀಯ ಪಕ್ಷಗಳ ಚಿಹ್ನೆ ಇರುವ ಕರಪತ್ರಗಳು, ಕಟೌಟ್ಗಳು, ಬ್ಯಾನರ್ ಮತ್ತು ಬಂಟಿಂಗ್ಗಳ ಮೂಲಕ ಪ್ರಚಾರ ಮಾಡುವಂತಿಲ್ಲ. ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಟಿ.ವಿ. ಮಾಧ್ಯಮಗಳು, ಪತ್ರಿಕೆಗಳ ಮೂಲಕ ರಾಜಕೀಯ ಮುಖಂಡರ ಭಾವಚಿತ್ರ ಮತ್ತು ಪಕ್ಷಗಳ ಚಿಹ್ನೆಗಳನ್ನು ಬಳಸಿ ಜಾಹೀರಾತು ನೀಡುವಂತಿಲ್ಲ. ಈ ನಿಯಮಗಳು ಉಲ್ಲಂಘನೆಯಾಗಿರುವುದು ಕಂಡು ಬಂದಲ್ಲಿ ಅಂತಹ ಚುನಾವಣೆ ಪ್ರಚಾರ ಸಾಮಗ್ರಿಗಳನ್ನು ಮುಟ್ಟುಗೋಲು ಹಾಕಿಕೊಂಡು ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.