ಮಡಿಕೇರಿ, ಡಿ. 14: ಗ್ರಾಮ ಪಂಚಾಯತ್ ಚುನಾವಣೆ-2020ರ ಸಂಬಂಧ ಕೊಡಗು ಜಿಲ್ಲೆಯ ಮೂರು ತಾಲೂಕುಗಳಲ್ಲಿ ಮಸ್ಟರಿಂಗ್, ಡಿ ಮಸ್ಟರಿಂಗ್ ಮತ್ತು ಭದ್ರತಾ ಕೊಠಡಿಗಳನ್ನು ಗುರುತಿಸಲಾಗಿದ್ದು, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ನಗರದ ಸಂತ ಜೋಸೆಫರ ಕಾನ್ವೆಂಟ್ ಶಾಲೆಯಲ್ಲಿ ಗುರುತಿಸಿರುವ ಮಡಿಕೇರಿ ತಾಲೂಕಿನ ಮಸ್ಟರಿಂಗ್, ಡಿ ಮಸ್ಟರಿಂಗ್ ಕೇಂದ್ರ ಮತ್ತು ಭದ್ರತಾ ಕೊಠಡಿಗಳಿಗೆ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಗರದ ಸಂತ ಜೋಸೆಫರ ಕಾನ್ವೆಂಟ್ ಶಾಲೆ, ವೀರಾಜಪೇಟೆ ತಾಲೂಕಿಗೆ ಸಂಬಂಧಿಸಿ ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜು, ಸೋಮವಾರಪೇಟೆ ತಾಲೂಕಿಗೆ ಸಂಬಂಧಿಸಿದಂತೆ ಕುಶಾಲನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳನ್ನು ಗುರುತಿಸಲಾಗಿದೆ.

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನಿಲೇಶ್, ಮಡಿಕೇರಿ ತಹಶೀಲ್ದಾರ್ ಮಹೇಶ್, ಡಿ.ವೈ.ಎಸ್.ಪಿ ದಿನೇಶ್ ಕುಮಾರ್, ನಗರ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ನಗರಸಭೆಯ ಪೌರಾಯುಕ್ತ ರಾಮದಾಸ್ ಹಾಜರಿದ್ದರು.