ಮಡಿಕೇರಿ ಡಿ,16 : ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ತಾ. 17 ರಂದು (ಇಂದು) ಜಿಲ್ಲೆಗೆ ಆಗಮಿಸಲಿದ್ದಾರೆ. ಬೆಳಗ್ಗೆ 11.30ಕ್ಕೆ ಮಡಿಕೇರಿಗೆ ಆಗಮಿಸಲಿರುವ ಸಚಿವರು ಇಂದಿನಿಂದ ಮೂರು ದಿನ ಜಿಲ್ಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಮಡಿಕೇರಿಯಲ್ಲಿ ನಡೆಯುವ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲಿರುವ ಸಚಿವರು ನಾಳೆ ವೀರಾಜಪೇಟೆ ತಾಲೂಕಿನಲ್ಲಿ ಆಯೋಜಿಸಿರುವ ಕಾರ್ಯಕರ್ತರ ಸಭೆ, ತಾ.19 ಸೋಮವಾರಪೇಟೆ ತಾಲೂಕಿನಲ್ಲಿ ನಡೆಯಲಿರುವ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲಿದ್ದಾರೆ.