ಮಡಿಕೇರಿ, ಡಿ. 16: ತೀವ್ರವಾದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರನ್ನು ಬೆಂಗಳೂರಿನ ನಿಮ್ಹಾನ್ಸ್‍ಗೆ ದಾಖಲು ಮಾಡಲಾಯಿತು.

ಆಯತಪ್ಪಿ ಬಿದ್ದು ತಲೆಗೆ ಗಂಭೀರ ಗಾಯಗೊಂಡು ನರಳುತ್ತಿದ್ದ ವ್ಯಕ್ತಿಯನ್ನು ಸ್ಥಳೀಯರು ಅಶ್ವಿನಿ ಆಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಯಲ್ಲಿನ ಆರೋಗ್ಯ ತಪಾಸಣೆಯಲ್ಲಿ ತಲೆಗೆ ಹೆಚ್ಚಿನ ಆಘಾತವಾಗಿದ್ದು ಹೆಚ್ಚಿನ ಚಿಕಿತ್ಸೆ ಅನಿವಾರ್ಯವೆಂದು ವೈದ್ಯರು ಹೇಳಿದ್ದ ಕಾರಣ ಪೆÇಲೀಸ್ ಇಲಾಖೆ ಮಡಿಕೇರಿಯ ಕೊಡಗು ಬ್ಲಡ್ ಡೋನರ್ಸ್ ತಂಡವನ್ನು ಸಂಪರ್ಕಿಸಿತ್ತು. ಮಡಿಕೇರಿ ನಿವಾಸಿಯಾದ ಇವರಿಗೆ ಸಂಬಂಧಿಕರು ಯಾರೂ ಇಲ್ಲವಾದ್ದರಿಂದ ಕೊಡಗು ಬ್ಲಡ್ ಡೋನರ್ಸ್ ಅಧ್ಯಕ್ಷ ವಿನು, ಶಕ್ತಿ ವೃದ್ಧಾಶ್ರಮದ ಮೇಲ್ವಿಚಾರಕ ಸತೀಶ್, ಪತ್ರಕರ್ತ ಚಂದನ್ ನಂದರಬೆಟ್ಟು ಹಾಗೂ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಪೆÇಲೀಸ್ ನೆರವಿನೊಡನೆ ಆ್ಯಂಬುಲೆನ್ಸ್ ವಾಹನದಲ್ಲಿ ಕರೆದೊಯ್ದು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು.