ಗೋಣಿಕೊಪ್ಪಲು, ಡಿ.16: ದಾನಗಳಲ್ಲಿ ಶ್ರೇಷ್ಠವಾದ ದಾನ ರಕ್ತದಾನ. ಬೇರೆ ಯಾವುದೇ ದಾನದಿಂದ ಮನುಷ್ಯನ ಜೀವ ಉಳಿಸಲು ಸಾಧ್ಯವಿಲ್ಲ, ನೀವು ನೀಡುವ ರಕ್ತ ಹಲವರ ಜೀವ ರಕ್ಷಕ ಆಗಬಹುದು ಎಂದು ಪೆÇನ್ನಂಪೇಟೆಯ ಶ್ರೀ ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿಬೋಧಸ್ವರೂಪಾನಂದ ಮಹರಾಜ್ ನುಡಿದರು. ಅವರು ಪೆÇನ್ನಂಪೇಟೆ ಶ್ರೀ ರಾಮಕೃಷ್ಣ ಶಾರದಾಶ್ರಮದ ಆಸ್ಪತ್ರೆಯಲ್ಲಿ ಸ್ವಾಮಿ ವಿವೇಕಾನಂದ ಯೂತ್ ಮೂವ್‍ಮೆಂಟ್ ಆಶ್ರಯ ಹಸ್ತ ಟ್ರಸ್ಟ್ ಸರಗೂರು, ಕೊಡಗು ಜಿಲ್ಲಾ ರಕ್ತನಿಧಿ ಕೇಂದ್ರ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಕೊಡಗು ಪತ್ರಿಕಾ ಭವನ ಟ್ರಸ್ಟ್ ಮಡಿಕೇರಿ, ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗ, ಪೆÇನ್ನಂಪೇಟೆ ಶ್ರೀ ರಾಮಕೃಷ್ಣ ಶಾರದಾಶ್ರಮ, ಗೋಣಿಕೊಪ್ಪ ರೋಟರಿ ಕ್ಲಬ್, ಗೋಣಿಕೊಪ್ಪ ವಾಹನ ಚಾಲಕರ ಸಂಘ , ಗೋಣಿಕೊಪ್ಪ ಆಟೋ ಚಾಲಕರ ಸಂಘ ಮತ್ತು ಪೆÇನ್ನಂಪೇಟೆ ಆಟೋ ಚಾಲಕರ ಸಂಘದ ಸಹಯೋಗದಲ್ಲಿ ನಡೆದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಮುಂದುವರೆದ ಅವರು ತುರ್ತು ಚಿಕಿತ್ಸೆಯ ಸಂದರ್ಭದಲ್ಲಿ ರಕ್ತದ ಗೋಣಿಕೊಪ್ಪಲು, ಡಿ.16: ದಾನಗಳಲ್ಲಿ ಶ್ರೇಷ್ಠವಾದ ದಾನ ರಕ್ತದಾನ. ಬೇರೆ ಯಾವುದೇ ದಾನದಿಂದ ಮನುಷ್ಯನ ಜೀವ ಉಳಿಸಲು ಸಾಧ್ಯವಿಲ್ಲ, ನೀವು ನೀಡುವ ರಕ್ತ ಹಲವರ ಜೀವ ರಕ್ಷಕ ಆಗಬಹುದು ಎಂದು ಪೆÇನ್ನಂಪೇಟೆಯ ಶ್ರೀ ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿಬೋಧಸ್ವರೂಪಾನಂದ ಮಹರಾಜ್ ನುಡಿದರು. ಅವರು ಪೆÇನ್ನಂಪೇಟೆ ಶ್ರೀ ರಾಮಕೃಷ್ಣ ಶಾರದಾಶ್ರಮದ ಆಸ್ಪತ್ರೆಯಲ್ಲಿ ಸ್ವಾಮಿ ವಿವೇಕಾನಂದ ಯೂತ್ ಮೂವ್‍ಮೆಂಟ್ ಆಶ್ರಯ ಹಸ್ತ ಟ್ರಸ್ಟ್ ಸರಗೂರು, ಕೊಡಗು ಜಿಲ್ಲಾ ರಕ್ತನಿಧಿ ಕೇಂದ್ರ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಕೊಡಗು ಪತ್ರಿಕಾ ಭವನ ಟ್ರಸ್ಟ್ ಮಡಿಕೇರಿ, ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗ, ಪೆÇನ್ನಂಪೇಟೆ ಶ್ರೀ ರಾಮಕೃಷ್ಣ ಶಾರದಾಶ್ರಮ, ಗೋಣಿಕೊಪ್ಪ ರೋಟರಿ ಕ್ಲಬ್, ಗೋಣಿಕೊಪ್ಪ ವಾಹನ ಚಾಲಕರ ಸಂಘ , ಗೋಣಿಕೊಪ್ಪ ಆಟೋ ಚಾಲಕರ ಸಂಘ ಮತ್ತು ಪೆÇನ್ನಂಪೇಟೆ ಆಟೋ ಚಾಲಕರ ಸಂಘದ ಸಹಯೋಗದಲ್ಲಿ ನಡೆದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಮುಂದುವರೆದ ಅವರು ತುರ್ತು ಚಿಕಿತ್ಸೆಯ ಸಂದರ್ಭದಲ್ಲಿ ರಕ್ತದ ಕೊರತೆಯಿಂದ ಹಲವಾರು ಬಾರಿ ತೊಂದರೆಗಳನ್ನು ಅನುಭವಿಸ ಬೇಕಾಯಿತು. ಆ ಕಾರಣದಿಂದಲೇ ತಾವು ಸಂಸ್ಥೆಯ ವತಿಯಿಂದ ಎಲ್ಲ ಸಂಘ ಸಂಸ್ಥೆಗಳ ಸಹಕಾರದಿಂದ ಈ ಕಾರ್ಯಕ್ರಮ ನಡೆಸುತ್ತಿರುವುದಾಗಿ ತಿಳಿಸಿದರು. ವೇದಿಕೆಯಲ್ಲಿ ಸ್ವಾಮಿ ಪರಹಿತಾನಂದ ಮಹರಾಜ್, ಶ್ರೀ ರಾಮಕೃಷ್ಣ ಆಶ್ರಮದ ಆಸ್ಪತ್ರೆಯ ಡಾ. ವಿಕಾಸ್ ಮಂಡಲ್, ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್‍ನ ಕೋಶಾಧಿಕಾರಿ ಗೋಣಿಕೊಪ್ಪಲಿನ ಡಾ. ಕೆ ಚಂದ್ರಶೇಖರ್, ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್, ಗೋಣಿಕೊಪ್ಪಲು ರೋಟರಿ ಕ್ಲಬ್‍ನ ಅಧ್ಯಕ್ಷೆ ಮೂಕಳೇರ ಬೀಟಾ ಲಕ್ಷಣ್, ಕಾರ್ಯದರ್ಶಿ ಕೆ.ಸಿ.ಮುತ್ತಪ್ಪ, ಯೂತ್ ಮೂವಮೆಂಟಿನ ಡಾ ವಿಶ್ವೇಶ್ ವಿಷುÐನಾಯಕ್, ವೆಂಕಟಸ್ವಾಮಿ, ಅಂಕಾಚಾರಿ, ಅನಂತ್ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ರಕ್ತದಾನ ಶಿಬಿರದಲ್ಲಿ 70 ಕ್ಕೂ ಹೆಚ್ಚು ದಾನಿಗಳು ರಕ್ತದಾನ ಮಾಡಿದರು. ಪ್ರತಿದಾನಿಗೆ ಸಂಘ ಸಂಸ್ಥೆಗಳ ಸಹಕಾರದಿಂದ ಎಳನೀರು, ಹಣ್ಣು ಹಂಪಲು ಮತ್ತು ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು. ಸಂಸ್ಥೆಯ ಶಾಲಿನಿ ಸ್ವಾಗತಿಸಿ, ಕೃತಿ ವಂದಿಸಿದರು. ಗಾಯತ್ರಿ ನಿರೂಪಿಸಿದರು.
ಪೊನ್ನಂಪೇಟೆಯ ಗೋಲ್ಡನ್ ಜೆ.ಸಿ.ಐ ಸಂಸ್ಥೆಯ ಮಾಜಿ ಅಧ್ಯಕ್ಷ ಕೇಚಮಾಡ ಎಂ. ಶಿವು ನಾಚಪ್ಪ ತಮ್ಮ ಹುಟ್ಟುಹಬ್ಬದ ದಿನದಂದೇ ರಕ್ತದಾನ ಮಾಡಿ ಪ್ರಶಂಸೆಗೆ ಪಾತ್ರರಾದರು.