ಗೋಣಿಕೊಪ್ಪ ವರದಿ, ಡಿ. 15: ಪೊನ್ನಂಪೇಟೆ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜುವಿನಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿಭಾಗದ ಆಶ್ರಯದಲ್ಲಿ "ರೀಸೆಂಟ್ ಟ್ರೆಂಡ್ಸ್ ಇನ್ ಇಂಜಿನಿಯರಿಂಗ್'' ಎಂಬ ವಿಷಯದಲ್ಲಿ ವೆಬಿನಾರ್ ನಡೆಯಿತು.

ವಿದ್ಯಾರ್ಥಿ ಹಾಗೂ ಉಪನ್ಯಾಸಕರಲ್ಲಿ ಆಧುನಿಕ ತಾಂತ್ರಿಕ ಕೌಶಲ್ಯ ವೃದ್ಧಿಸಿಕೊಳ್ಳುವ ಸಲುವಾಗಿ ನಡೆದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್‍ನ ಡಾ. ಅಶೋಕ್ ರಾವ್, ಡಾ. ಅರುಲಾಲನ್ ರಾಜನ್, ಚೆನ್ನೈ ಮ್ಯಾಥಮೆಟಿಕಲ್ ಇನ್ಸ್ಟಿಟ್ಯೂಟ್‍ನ ಡಾ. ಸಂದೇಶ್ ಕಾಮತ್ ಹಾಗೂ ಪೆÇ್ರ. ನರಸಿಂಹನ್ ಮಾಹಿತಿ ಹಂಚಿಕೊಂಡರು.

ಆನ್‍ಲೈನ್ ಕಾರ್ಯಾಗಾರದಲ್ಲಿ ರಾಜ್ಯದ ವಿವಿಧ ಇಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಭಾಗವಹಿಸಿದ್ದರು. ಪ್ರಾಂಶುಪಾಲ ಡಾ. ಬಸವರಾಜ್ ಮತ್ತು ಸಿಬ್ಬಂದಿ ಕಾರ್ಯಾಗಾರದಲ್ಲಿ ಪಾಲ್ಗೊಂಡರು.