ಮಡಿಕೇರಿ, ಡಿ, 16 : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಆಶ್ರಯದಲ್ಲಿ ವಿಶ್ವ ಅಲ್ಪಸಂಖ್ಯಾತ ಜನಾಂಗದ ಹಕ್ಕುಗಳ ದಿನಾಚರಣೆ ಅಂಗವಾಗಿ ತಾ. 18 ರಂದು ವಾರ್ಷಿಕ ತೋಕ್ ನಮ್ಮೆ ಉತ್ಸವ (ಗನ್ ಕಾರ್ನಿವಲ್) ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ಅಧ್ಯಕ್ಷ ನಂದಿನೆರವಂಡ ಯು ನಾಚಪ್ಪ ತಿಳಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಂದು ಬೆಳಗ್ಗೆ 10.30 ಕ್ಕೆ ನಾಪೆÇೀಕ್ಲುವಿನ ಕೊಳಕೇರಿಯಲ್ಲಿರುವ ಅಪ್ಪಚ್ಚೀರ ರಮ್ಮಿ ನಾಣಯ್ಯ ಅವರ ಕಾವೇರಿ ಎಸ್ಟೇಟ್ ಮೈದಾನದಲ್ಲಿ ತೋಕ್ ನಮ್ಮೆ ನಡೆಯಲಿದೆ.
ಕೊಡವ ಬುಡಕಟ್ಟು ಕುಲದ ನಾಗರೀಕತೆ ಉಗಮವಾದಾಗಿ ನಿಂದಲೂ ಆಯುಧಗಳು ಅವರ ಬದುಕಿನ ಅವಿಭಾಜ್ಯ ಅಂಗವಾಗಿದ್ದು, ಅದೊಂದು ಪರಂಪರೆಯಾಗಿಯೂ, ಜೀವನ ವಿಧಾನವಾಗಿಯೂ ಮುಂದುವರೆದಿದ್ದು, ಇದರ ಹಕ್ಕು ಮತ್ತು ರಕ್ಷಣೆ ಅಭಾದಿತವಾಗಿ ಮುಂದುವರೆಯಲು ರಾಜ್ಯಾಂಗ ಖಾತ್ರಿಗಾಗಿ ಹಲವು ಮಹತ್ವದ ನಿರ್ಣಯಗಳನ್ನು ಕಾರ್ಯಕ್ರಮದಲ್ಲಿ ಅಂಗೀಕರಿಸಲಾಗುವುದು ಎಂದು ನಾಚಪ್ಪ ತಿಳಿಸಿದ್ದಾರೆ.
ಕೊಡವ ನಾಗರಿಕತೆ ಉಗಮವಾದಾಗಿನಿಂದಲೂ ತಮ್ಮ ಬದುಕಿನ ಅವಿಭಾಜ್ಯ ಅಂಗವಾಗಿ ಬಳಸುತ್ತಾ ಬಂದಿರುವ ಆಯುಧವನ್ನು ನಿರಂತರವಾಗಿ ಪೂಜಿಸುವ ಪದ್ಧತಿಯನ್ನು ಮುಂದಿನ ಪೀಳಿಗೆಯು ಮುಂದುವರಿಸಿಕೊಂಡು ಹೋಗುವಂತೆ ಯುವ ಜನಾಂಗಕ್ಕೆ ಪ್ರೇರಣೆ ಮೂಡಿಸಬೇಕೆಂದು ನಿರ್ಣಯಿಸಲಾಗುವುದು, ಬಂದೂಕ ಕೊಡವರ ಧಾರ್ಮಿಕ ಮತ್ತು ಸಾಂಸ್ಕøತಿಕ ಲಾಂಛನವಾಗಿದ್ದು ಅದನ್ನು ಸರಕಾರ ಮಾನ್ಯ ಮಾಡಿ ಗೌರವಿಸಬೇಕೆಂದು ಒತ್ತಾಯಿಸಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಅಂದು ಬೆಳಗ್ಗೆ ಸಿ.ಎನ್.ಸಿ ಅಧ್ಯಕ್ಷ ಎನ್.ಯು. ನಾಚಪ್ಪ ನೇತೃತ್ವದಲ್ಲಿ ಬಂದೂಕ ಕುರಿತಾದ ತೋಕ್ ಪಾಟ್ನೊಂದಿಗೆ ಬಂದೂಕಿಗೆ ಸಾಮೂಹಿಕ ಪೂಜೆ ನೆರವೇರಿಸಲಾಗುವುದು. ನಂತರ ಮಹಿಳೆಯರು, ಮಕ್ಕಳು ಮತ್ತು ಪುರುಷರಿಗೆ ಪ್ರತ್ಯೇಕವಾಗಿ ತೆಂಗಿನಕಾಯಿಗೆ ಗುರಿಯಿಟ್ಟು ಗುಂಡು ಹೊಡೆಯುವ ಸ್ಪರ್ಧೆ ನಡೆಯಲಿದೆ. ಸ್ಪರ್ಧಾ ಕಾರ್ಯಕ್ರಮದ ನಂತರ ಸಭಾ ಕಾರ್ಯಕ್ರಮ ನಡೆಯಲಿದೆ. ಅತ್ಯುತ್ತಮ ಗುರಿಗಾರ ಮಹಿಳೆ ಮತ್ತು ಪುರುಷರಿಗೆ ವಿಶೇಷ ಬಹುಮಾನ ನಿಡಲಾಗುವುದು ಎಂದು ತಿಳಿಸಿದ್ದಾರೆ.