ಮಡಿಕೇರಿ, ಡಿ. 16: ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದಂತೆ ಕೊಡಗು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ತಾ. 19 ರಂದು ವ್ಯಾಜ್ಯ ಪೂರ್ವ ಪ್ರಕರಣಗಳು ಮತ್ತು ನ್ಯಾಯಾಲಯದಲ್ಲಿ ಬಾಕಿಯಿರುವ ರಾಜಿಯಾಗುವಂತಹ ಎಲ್ಲಾ ಪ್ರಕರಣಗಳನ್ನು ಮೆಗಾ ಲೋಕ ಅದಾಲತ್‍ನ ಮೂಲಕ ಇತ್ಯರ್ಥ ಪಡಿಸಲಾಗುವುದು. ಆಸಕ್ತರು ತಾ. 18 ರ ಮುಂಚಿತವಾಗಿ ತಮ್ಮ ವಕೀಲರನ್ನು ಸಂಪರ್ಕಿಸಿ ಪ್ರತಿ ದಿನ ನಡೆಯುವ ಲೋಕ ಅದಾಲತ್‍ನಲ್ಲಿ ಆಯಾಯ ನ್ಯಾಯಾಲಯಗಳಲ್ಲಿ ರಾಜಿ ಮಾಡಿಕೊಳ್ಳಬಹುದು. ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ನೂರುನ್ನೀಸಾ ತಿಳಿಸಿದ್ದಾರೆ.