ಕೂಡಿಗೆ, ಡಿ. 15: ರಾಜ್ಯ ಚುನಾವಣಾ ಆಯೋಗದಿಂದ ಕೊಡಗು ಜಿಲ್ಲೆಯ ಚುನಾವಣಾ ವೀಕ್ಷಕರಾಗಿ ನೇಮಕಗೊಂಡಿರುವ ದೇವರಾಜು ಅವರು ಕುಶಾಲನಗರ ಹೋಬಳಿ ವ್ಯಾಪ್ತಿಯ ತೊರೆನೂರು, ಶಿರಂಗಾಲ, ಹೆಬ್ಬಾಲೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದರು.

ನಂತರ ಮತಗಟ್ಟೆಯ ಕೇಂದ್ರಗಳಿಗೆ ಭೇಟಿ ನೀಡಿ ಆಯಾ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಈ ಸಂದರ್ಭ ಸೋಮವಾರಪೇಟೆ ತಹಶೀಲ್ದಾರ್ ಗೋವಿಂದ ರಾಜ್, ಕುಶಾಲನಗರ ಕಂದಾಯ ಪರಿವೀಕ್ಷಕ ಹೆಚ್.ಎಸ್. ಸಂತೋಷ್ ಸೇರಿದಂತೆ ಗ್ರಾ.ಪಂ. ಚುನಾವಣೆಗೆ ನೇಮಕಗೊಂಡ ಅಧಿಕಾರಿಗಳು, ಗ್ರಾ.ಪಂ. ವ್ಯಾಪ್ತಿಯ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು ಹಾಜರಿದ್ದರು.