ಸಿಬ್ಬಂದಿಗಳು ಹೊಸ ವರ್ಷಾಚರಣೆಯ ಸಂದರ್ಭದಲ್ಲೂ ಸೂಕ್ತ ರೀತಿಯಲ್ಲಿ ಪಾಲಿಸಲಿದ್ದಾರೆ.ಸರಕಾರದಿಂದ ಈ ಕುರಿತಾಗಿ ಯಾವುದೇ ಹೊಸ ಆದೇಶ ಇನ್ನೂ ಬಂದಿಲ್ಲ. ಒಂದು ವೇಳೆ ಹೊಸ ಆದೇಶ ಜಾರಿಗೆ ಬಂದಲ್ಲಿ ಅದರಂತೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಕರ್ತವ್ಯ ನಿರ್ವಹಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚುನಾವಣೆ: ಮುಂಜಾಗ್ರತೆಮೊದಲ ಪುಟದಿಂದ) ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈಗಾಗಲೇ ಹಲವು ಸಭೆಗಳು ಈ ನಿಟ್ಟಿನಲ್ಲಿ ಜರುಗಿದ್ದು, ಜಿಲ್ಲೆಯಾದ್ಯಂತ ಪೊಲೀಸರು ಸೂಕ್ತ ನಿಗಾವಹಿಸುತ್ತಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ ಅವರು ತಿಳಿಸಿದ್ದಾರೆ.‘ಶಕ್ತಿ’ಯೊಂದಿಗೆ ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ಜಿಲ್ಲಾಧಿಕಾರಿಗಳು ಹಾಗೂ ಚುನಾವಣಾ ಅಧಿಕಾರಿಯೂ ಆಗಿರುವ ಅನೀಸ್ ಕಣ್ಮಣಿ ಜಾಯ್ ಅವರು ಅಗತ್ಯ ಕ್ರಮಗಳ ಬಗ್ಗೆ ಸಭೆ ನಡೆಸಿದ್ದಾರೆ ಎಂದು ತಿಳಿಸಿರುವ ಕ್ಷಮಾ ಮಿಶ್ರಾ ಅವರು, ಶಾಂತಿಯುತವಾದ ಚುನಾವಣೆಯನ್ನು ನಡೆಸಲು ಪೊಲೀಸ್ ಇಲಾಖೆ ಸನ್ನದ್ಧವಾಗಿದ್ದು, ಕಾನೂನಾತ್ಮಕವಾದ ಕಾರ್ಯ ನಿರ್ವಹಿಸಲಿದೆ ಎಂದು ತಿಳಿಸಿದರು.