ಮಡಿಕೇರಿ, ಡಿ.16: ಕೊಡಗು ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ವತಿಯಿಂದ 2019-20ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ಶೇ. ನೂರಕ್ಕೆ ನೂರು ಫಲಿತಾಂಶ ಪಡೆದ ಕಾಲೇಜುಗಳಿಗೆ ಮತ್ತು ರಾಷ್ಟ್ರ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿ ಬಹುಮಾನ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವು ನಗರದ ಪದವಿ ಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ನಡೆಯಿತು.
ಪೆÇನ್ನಂಪೇಟೆ ರಾಮಕೃಷ್ಣ ಶಾರದಾಶ್ರಮದ ಅಧ್ಯಕ್ಷರಾದ ಸ್ವಾಮಿ ಬೋಧಸ್ವರೂಪಾನಂದಜೀ ಮಹಾರಾಜ್ ಅವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಬಾಹುಬಲ, ಬುದ್ಧಿಬಲ, ಆತ್ಮಬಲ ಎಂಬ ವಿಚಾರವಾಗಿ ವಿದ್ಯಾರ್ಥಿಗಳಿಗೆ ನೈತಿಕ ಮೌಲ್ಯದ ಬಗ್ಗೆ ತಿಳಿಸಿದರು.
‘ಶಕ್ತಿ’ಯ ಸಲಹಾ ಸಂಪಾದಕ ಬಿ.ಜಿ. ಅನಂತಶಯನ ಅವರು ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನೆರವೇರಿಸಿ ಮಾತ ನಾಡಿ ವಿದ್ಯಾರ್ಥಿಗಳು ಅಂಕಗಳಿಸು ವುದರ ಜೊತೆಗೆ ನಿರ್ದಿಷ್ಟ ಗುರಿ ಹೊಂದಿರಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ವಿಷ್ಣುಮೂರ್ತಿ ಅವರು 2019-20ನೇ ಸಾಲಿನಲ್ಲಿ ಕೊಡಗು ಜಿಲ್ಲೆ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮೂರನೇ ಸ್ಥಾನವನ್ನು ಪಡೆದು ಕೊಂಡಿದೆ. ಮುಂದಿನ ದಿನಗಳಲ್ಲಿ ಮೊದಲನೆ ಸ್ಥಾನವನ್ನು ಪಡೆದುಕೊಳ್ಳುವಂತಾಗಬೇಕು ಎಂದು ಪ್ರಾಂಶುಪಾಲರಿಗೆ ಸೂಚಿಸಿದರು. ಅಖಿಲಾ ಪ್ರಾರ್ಥಿಸಿದರು. ಉಪನ್ಯಾಸಕ ನಂದೀಶ್ ನಿರೂಪಿಸಿದರು. ಬೆಳ್ಳಿಯಪ್ಪ ಅವರು ಸ್ವಾಗತಿಸಿ, ವಂದಿಸಿದರು.