ಮಡಿಕೇರಿ, ಡಿ. 16: ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಮೇಕೇರಿ ವಲಯಕ್ಕೆ ಭೇಟಿ ನೀಡಿದ ಕೆ.ಪಿ.ಸಿ.ಸಿ. ಕಾನೂನು ಘಟಕದ ರಾಜ್ಯಾಧ್ಯಕ್ಷ ಎ.ಎಸ್. ಪೆÇನ್ನಣ್ಣ ಅವರು ಮೇಕೇರಿ ಪಂಚಾಯಿತಿ ಹಾಗೂ ಹಾಕತ್ತೂರು ಪಂಚಾಯಿತಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರು. ಗ್ರಾಮ ಪಂಚಾಯಿತಿ ಚುನಾವಣೆಯನ್ನು ಪಕ್ಷವು ಗಂಭೀರವಾಗಿ ಪರಿಗಣಿಸಿದ್ದು, ಕಾಂಗ್ರೆಸ್ ಕಾರ್ಯಕರ್ತರು ಒಗ್ಗಟ್ಟಿನಿಂದ ಚುನಾವಣೆ ಎದುರಿಸಲು ಕರೆ ನೀಡಿದರು.
ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನೀರಾ ಮೈನಾ ಮಾತನಾಡಿ, ಗ್ರಾಮೀಣ ಮತದಾರರ ಒಲವು ಈ ಬಾರಿ ಕಾಂಗ್ರೆಸ್ ಪರವಾಗಿರುವುದು ನಿಚ್ಚಳವಾಗಿದ್ದು, ಮೇಕೇರಿ ಪಂಚಾಯಿತಿ ಮತ್ತು ಹಾಕತ್ತೂರು ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಅಧಿಕಾರದ ಗದ್ದುಗೆ ಏರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಹೊಸೂರು ಸೂರಜ್, ಡಿಸಿಸಿ ಸದಸ್ಯರಾದ ಪುಷ್ಪ ಪೂಣಚ್ಚ, ಡಿಸಿಸಿ ಮಾಜಿ ಖಜಾಂಚಿ ಶ್ರೀಧರ್ ನಾಯರ್, ಮೇಕೇರಿ ವಲಯ ಕಾಂಗ್ರೆಸ್ ಅಧ್ಯಕ್ಷ ಚೆಟ್ಟೋಳಿರ ಪ್ರಕಾಶ್ ಪೂಣಚ್ಚ, ಹಾಕತ್ತೂರು ವಲಯ ಕಾಂಗ್ರೆಸ್ ಅಧ್ಯಕ್ಷ ಖಾಲಿದ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಪಿಯೂಸ್ ಫೆರೆರಾ, ಕಾಂಗ್ರೆಸ್ ಮುಖಂಡ ಹೆಚ್.ಸಿ. ಪೆÇನ್ನಪ್ಪ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮೇಕೇರಿ ಹನೀಫ್, ಡಿಎಸ್‍ಎಸ್ ಜಿಲ್ಲಾ ಪ್ರಮುಖ ದೀಪಕ್ ಸೇರಿದಂತೆ ಮೇಕೇರಿ-ಹಾಕತ್ತೂರು ಗ್ರಾಮ ಪಂಚಾಯಿತಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.