ಕೂಡಿಗೆ, ಡಿ. 15: ತೊರೆನೂರು ಗ್ರಾ.ಪಂ. ವ್ಯಾಪ್ತಿಯ ಸಿದ್ದಲಿಂಗಪುರ ಗ್ರಾಮದಲ್ಲಿ ಜಿಲ್ಲಾ ಪಂಚಾಯಿತಿ ಅನುದಾನದಲ್ಲಿ ಕುಡಿಯುವ ನೀರಿನ ಟ್ಯಾಂಕ್ ಕಾಮಗಾರಿ ನಡೆಯುತ್ತಿದೆ. ಜಿ.ಪಂ. ಅನುದಾನ ರೂ. 8 ಲಕ್ಷ ವೆಚ್ಚದಲ್ಲಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಸೂಚನೆಯಂತೆ ಸಿದ್ದಲಿಂಗಪುರ ಗ್ರಾಮದಲ್ಲಿ ಹೈಟೆಕ್ ಟ್ಯಾಂಕ್ ನಿರ್ಮಾಣ ಮಾಡಲಾಗುತ್ತಿದೆ.

ಗ್ರಾಮಸ್ಥರ ಮನವಿ ಮೇರೆಗೆ ಜಿ.ಪಂ. ಇಂಜಿನಿಯರ್ ವೀರೇಂದ್ರಕುಮಾರ್ ಸ್ಥಳ ಪರಿಶೀಲನೆ ನಡೆಸಿ ಕಾಮಗಾರಿ ಪ್ರಾರಂಭಕ್ಕೆ ಅನುಮೋದನೆ ನೀಡಿದರು.