ಮಡಿಕೇರಿ, ಡಿ. 15: ಜಿಲ್ಲೆಯಲ್ಲಿ ತಾ. 15 ರಂದು ಹೊಸದಾಗಿ 24 ಕೊರೊನಾ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಇದುವರೆಗೆ 1,01,110 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಿಸಿದ್ದು, 5,547 ಮಂದಿಗೆ ಸೋಂಕು ತಗುಲಿದೆ. ಈ ಪೈಕಿ 5,344 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 74 ಮಂದಿ ಸಾವನ್ನಪ್ಪಿದ್ದು 129 ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿತರ ಪೈಕಿ 19 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ, 2 ಮಂದಿ ಕೋವಿಡ್ ಕೇರ್ ಸೆಂಟರ್‍ನಲ್ಲಿ, 108 ಮಂದಿ ಹೋಮ್ ಐಸೋಲೇಷನ್‍ನಲ್ಲಿ ದಾಖಲಾಗಿದ್ದಾರೆ. ಜಿಲ್ಲೆಯಾದ್ಯಂತ 64 ನಿಯಂತ್ರಿತ ವಲಯಗಳಿವೆ.