ಮಡಿಕೇರಿ, ಡಿ. 16: ಜಿಲ್ಲೆಯಲ್ಲಿ ತಾ.16 ರಂದು ಹೊಸದಾಗಿ 24 ಕೊರೊನಾ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಇದುವರೆಗೆ 1,01,981 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಿಸಿದ್ದು, 5,571 ಮಂದಿಗೆ ಸೋಂಕು ತಗುಲಿದೆ. ಈ ಪೈಕಿ 5,358 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 74 ಮಂದಿ ಸಾವನ್ನಪ್ಪಿದ್ದು 139 ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿತರ ಪೈಕಿ 21 ಮಂದಿ ಕೋವಿಡ್ ಆಸ್ಪತ್ರೆಯಲ್ಲಿ , 2 ಮಂದಿ ಕೋವಿಡ್ ಕೇರ್ ಸೆಂಟರ್ ನಲ್ಲಿ, 116 ಮಂದಿ ಹೋಮ್ ಐಸೋಲೇಷನ್ ನಲ್ಲಿ ದಾಖಲಾಗಿದ್ದಾರೆ. ಜಿಲ್ಲೆ ಯಾದ್ಯಂತ 74 ನಿಯಂತ್ರಿತ ವಲಯಗಳಿವೆ.