ನಾಪೆÇೀಕ್ಲು, ಡಿ. 17: ಪ್ರಧಾನಿ ನರೇಂದ್ರ ಮೋದಿ ಪ್ರತೀ ಗ್ರಾಮ ಪಂಚಾಯಿತಿಗೂ ಅನುದಾನ ನೀಡುವದರ ಮೂಲಕ ಅಭಿವೃದ್ಧಿಯ ಹರಿಕಾರ ಎನಿಸಿಕೊಂಡಿದ್ದಾರೆ. ಬಿಜೆಪಿ ಸರಕಾರ ನಡೆಸಿರುವ ಅಭಿವೃದ್ಧಿಯ ಹೆಸರಿನಲ್ಲಿ ಕಾರ್ಯಕರ್ತರು ಮತಯಾಚಿಸಿ ಎಂದು ರಾಜ್ಯ ವಸತಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಕಾರ್ಯಕರ್ತರಿಗೆ ಕರೆ ನೀಡಿದರು.

ನಾಪೆÇೀಕ್ಲು ಮಹಾ ಶಕ್ತಿ ಕೇಂದ್ರದ ವತಿಯಿಂದ ಹಳೇತಾಲೂಕು ಭಗವತಿ ದೇವಳದ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ಗ್ರಾಮ ಪಂಚಾಯಿತಿ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಇನ್ನೊಂದು ಬಾರಿಯ ಚುನಾವಣೆ ಎದುರಿಸುವ ಸಂದರ್ಭ ಶೇ. 40ರಷ್ಟು ಅಲ್ಪಸಂಖ್ಯಾತರು ಮೋದಿ ಜೊತೆ ಸೇರಲಿದ್ದಾರೆ ಎಂದು ಭವಿಷ್ಯ ನುಡಿದ ಅವರು, ಮುಸಲ್ಮಾನರು ಸಹ ನಮ್ಮ ಸಹೋದರರು. ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆಯಲ್ಲಿ ಗೆಲುವು ಸಾಧಿಸಬೇಕು ಎಂದರು.

ಸಂಸದ ಪ್ರತಾಪ್ ಸಿಂಹ ಮಾತನಾಡಿ ಕಾರ್ಯಕರ್ತರು ಆತ್ಮವಿಶ್ವಾಸ ಹೆಚ್ಚು ಮಾಡಿಕೊಳ್ಳಬೇಕು. ಯಾವ ಸರಕಾರ, ಯಾವ ಪ್ರಧಾನಿಯೂ ಮಾಡದ ಅಭಿವೃದ್ಧಿ ಕಾರ್ಯವನ್ನು ಪ್ರಧಾನಿ ಮೋದಿ ಮಾಡಿದ್ದಾರೆ. 14ನೇ ಹಣಕಾಸು ಯೋಜನೆಯಲ್ಲಿ ಗ್ರಾಮ ಪಂಚಾಯಿತಿಗೆ ನೇರವಾಗಿ ಅನುದಾನ ಮಂಜೂರು ಮಾಡಿ ಅಭಿವೃದ್ಧಿಗೆ ಸಹಕರಿಸಿದ್ದಾರೆ ಎಂದರು.

ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ, ಹಿಂದಿನಂತೆ ಈ ಚುನಾವಣೆ ಆಗಬಾರದು. ನಾಪೆÇೀಕ್ಲು ಗ್ರಾಮ ಪಂಚಾಯಿತಿಯಲ್ಲಿ ಹಿಂದೆ ನಡೆದ ಸಣ್ಣಪುಟ್ಟ ತಪ್ಪುಗಳನ್ನು ಸರಿಪಡಿಸಿಕೊಂಡು ಜಯಗಳಿಸಬೇಕು. ಬಿಜೆಪಿ ಅಲ್ಪಸಂಖ್ಯಾತರ ವಿರೋಧಿಯಲ್ಲ. ಇದಕ್ಕೆ ಎಮ್ಮೆಮಾಡು ಗ್ರಾಮ ಪಂಚಾಯಿತಿಗೆ ಸುಮಾರು 15 ಕೋಟಿ ರೂ.ಗಳಷ್ಟು ಅನುದಾನ ನೀಡಿರುವದೇ ಸಾಕ್ಷಿ ಎಂದರು.

ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ, ಮುಖಂಡರಾದ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ಮಾತನಾಡಿದರು.

ವೇದಿಕೆಯಲ್ಲಿ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಭಾರತೀಶ್, ಮುಖಂಡರಾದ ಪಶ್ಚಿಮ ಘಟ್ಟ ಅರಣ್ಯ ಸಂರಕ್ಷಣಾ ಕಾರ್ಯಪಡೆ ಸಮಿತಿ ಅಧ್ಯಕ್ಷ ರವಿ ಕುಶಾಲಪ್ಪ, ತಾ.ಪಂ. ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್, ಶಿವಚಾಳಿಯಂಡ ಅಂಬಿ ಕಾರ್ಯಪ್ಪ, ಕಾಂಗೀರ ಸತೀಶ್, ರವಿ ಕಾಳಪ್ಪ, ಮಾದಪ್ಪ, ಮತ್ತಿತರರು ಇದ್ದರು.

ಜಿ.ಪಂ. ಸದಸ್ಯ ಪಾಡಿಯಮ್ಮಂಡ ಮುರಳಿ ಕರುಂಬಮ್ಮಯ್ಯ ಸ್ವಾಗತಿಸಿ, ಗ್ರಾ.ಪಂ. ಮಾಜಿ ಸದಸ್ಯ ಶಿವಚಾಳಿಯಂಡ ಜಗದೀಶ್ ವಂದಿಸಿದರು.