ಸೋಮವಾರಪೇಟೆ,ಡಿ.17: ಸೋಮವಾರಪೇಟೆ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸಲು ತಾ. 19ರಂದು (ನಾಳೆ) ಬೆಳಿಗ್ಗೆ 11 ಗಂಟೆಗೆ ಸೋಮವಾರಪೇಟೆಯ ಉಪ ವಿಭಾಗ ಕಚೇರಿ ಆವರಣದಲ್ಲಿ ಗ್ರಾಹಕರ ಸಂಪರ್ಕ ಸಭೆ ಆಯೋಜಿಸಲಾಗಿದೆ.
ವಿದ್ಯುತ್ ಸರಬರಾಜಿಗೆ ಸಂಬಂಧಿಸಿದಂತೆ ಸಮಸ್ಯೆ ಅಥವಾ ದೂರುಗಳಿದ್ದಲ್ಲಿ ಸಭೆಯಲ್ಲಿ ಚರ್ಚಿಸಿ ಪರಿಹಾರ ಪಡೆಯಬಹುದೆಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.