ಕರಿಕೆ, ಫೆ. ೨೫: ಜಿಲ್ಲೆಯ ಗಡಿ ಗ್ರಾಮ ಕರಿಕೆ ಚೆಕ್ ಪೋಸ್ಟ್ನಲ್ಲಿ ಕರ್ತವ್ಯ ನಿರತ ಸಿಬ್ಬಂದಿಗಳೊAದಿಗೆ ಸ್ಥಳೀಯ ಕೆಲ ಯುವಕರು ಕ್ಷುಲ್ಲಕ ಕಾರಣಕ್ಕೆ ಜಗಳವಾಡಿ ಹಲ್ಲೆಗೆ ಮುಂದಾದ ಘಟನೆ ನಡೆದಿದೆ. ತಾ. ೨೪ ರಂದು ರಾತ್ರಿ ಪಾಳಿಯಲ್ಲಿದ್ದ ಆರೋಗ್ಯ ನಿರೀಕ್ಷಕರು ಹಾಗೂ ಸ್ಥಳೀಯ ಕೆಲವು ಯುವಕರೊಂದಿಗೆ ಮಾಸ್ಕ್ ಧರಿಸದ ವಿಚಾರದಲ್ಲಿ ವಾಗ್ವಾದ ನಡೆದಿದ್ದು, ನಂತರ ಹಲ್ಲೆಗೆ ಮುಂದಾದಾಗ ಸ್ಥಳದಲ್ಲಿದ್ದ ಕರಿಕೆ ವಿಸ್ತಾರಣಾ ಕೇಂದ್ರದ ವೈದ್ಯಾಧಿಕಾರಿ ಹಾಗೂ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಗಳು ಪರಿಸ್ಥಿತಿ ತಿಳಿಗೊಳಿಸಿದರು. ಈ ಘಟನೆ ಬಗ್ಗೆ ಆರೋಗ್ಯ ಸಿಬ್ಬಂದಿಗಳು ಪೊಲೀಸ್ ಠಾಣೆಗೆ ದೂರು ನೀಡಿದ ಮೇರೆಗೆ ಇಂದು ಭಾಗಮಂಡಲ ಠಾಣಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಕರಿಕೆ ಉಪ ಠಾಣೆೆಗೆ ಯುವಕರನ್ನು ಕರೆದು ಮುಂದೆ ಇಂತಹ ಧುರ್ವರ್ತನೆ ತೋರದಂತೆ ಬುದ್ಧಿವಾದ ಹೇಳಿ ಮುಚ್ಚಳಿಕೆ ಬರೆಸಿ ರಾಜಿ ತೀರ್ಮಾನದೊಂದಿಗೆ ಪ್ರಕರಣವನ್ನು ಇತ್ಯರ್ಥ ಗೊಳಿಸಲಾಯಿತು.