೩ನೇ ಟೆಸ್ಟ್ನಲ್ಲಿ ೨ ದಿನಕ್ಕೆ ಇಂಗ್ಲೆAಡ್ ವಿರುದ್ಧ ಗೆದ್ದ ಭಾರತ

ಅಹಮದಾಬಾದ್, ಫೆ. ೨೫: ಜಗತ್ತಿನ ಅತೀ ದೊಡ್ಡ ಕ್ರಿಕೆಟ್ ಕ್ರೀಡಾಂಗಣ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಟೀಂ ಇಂಡಿಯಾ ಐತಿಹಾಸಿಕ ದಾಖಲೆ ಬರೆದಿದೆ. ಕ್ರೀಡಾಂಗಣದಲ್ಲಿ ಆಡಿದ ಮೊದಲ ಅಂತರರಾಷ್ಟಿçÃಯ ಪಂದ್ಯದಲ್ಲೇ ಟೀಂ ಇಂಡಿಯಾ ಗೆಲುವು ದಾಖಲಿಸಿದೆ. ಇಂಗ್ಲೆAಡ್ ವಿರುದ್ಧ ನಿನ್ನೆ ಆರಂಭವಾಗಿದ್ದ ಮೂರನೇ ಟೆಸ್ಟ್ ಪಂದ್ಯದಲ್ಲಿ ಮೊದಲ ಬ್ಯಾಟಿಂಗ್ ಮಾಡಿದ್ದ ಇಂಗ್ಲೆAಡ್ ಕೇವಲ ೧೧೨ ರನ್‌ಗಳಿಗೆ ಆಲೌಟ್ ಆಗಿತ್ತು. ನಂತರ ಬ್ಯಾಟ್ ಮಾಡಿದ್ದ ಟೀಂ ಇಂಡಿಯಾ ೧೪೫ ರನ್‌ಗಳಿಗೆ ಆಲೌಟ್ ಆಗಿದ್ದು ೩೩ ರನ್‌ಗಳ ಮುನ್ನಡೆ ಸಾಧಿಸಿತ್ತು. ನಂತರ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದ ಇಂಗ್ಲೆAಡ್ ೮೧ ರನ್‌ಗಳಿಗೆ ಆಲೌಟ್ ಆಗಿದ್ದು ಭಾರತಕ್ಕೆ ಗೆಲ್ಲಲು ೪೯ ರನ್‌ಗಳ ಗುರಿ ನೀಡಿತ್ತು. ಈ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಪರ ಆರಂಭಿಕರಾದ ರೋಹಿತ್ ಶರ್ಮಾ ಅಜೇಯ ೨೫ ಮತ್ತು ಶುಭ್ಮನ್ ಗಿಲ್ ಅಜೇಯ ೧೫ ರನ್ ಬಾರಿಸುವ ಮೂಲಕ ತಂಡಕ್ಕೆ ಗೆಲುವು ತಂದುಕೊಟ್ಟಿದ್ದಾರೆ. ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ೨-೧ ಅಂತರದಿAದ ಮುನ್ನಡೆ ಸಾಧಿಸಿದೆ.

ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವು

ಹಾವೇರಿ, ಫೆ. ೨೫: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ನಾಲ್ವರು ಧಾರುಣ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನ ಇಟಗಿ ಸಮೀಪ ನಡೆದಿದೆ. ದುರಂತದಲ್ಲಿ ತಂದೆ, ತಾಯಿ ಹಾಗೂ ಇಬ್ಬರು ಮಕ್ಕಳು ಮರಣ ಹೊಂದಿದ್ದಾರೆ. ಮೃತರನ್ನು ಸಿದ್ದಪ್ಪ ನಾಗೇನಹಳ್ಳಿ (೪೦), ಅನಸೂಯಮ್ಮ (೩೨) ವನಿತಾ (೧೧) ಮತ್ತು ಸುನೀತಾ (೯) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಹೆಚ್ಚುವರಿ ಎಸ್.ಪಿ. ಮಲ್ಲಿಕಾರ್ಜುನ ಬಾಲವಂಡಿ ಹಾಗೂ ಸಿಪಿಐಗಳಾದ ಶ್ರೀಶೈಲ ಚೌಗಲ, ಭಾಗ್ಯವಂತಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಘಟನೆ ಸಂಬAಧ ಹಲಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕ್ರಿಮಿನಲ್ ಪ್ರಕರಣ ದಾಖಲಿಸಲು ಹೈಕೋರ್ಟ್ ಸೂಚನೆ

ಬೆಂಗಳೂರು, ಫೆ. ೨೫: ರಸ್ತೆಯಲ್ಲಿ ಫುಟ್‌ಪಾತ್‌ನಲ್ಲಿ ಓಡಾಡಬೇಕಾದರೇ ತೂಗುವ ಕೇಬಲ್ ವೈರ್ ಜೋತು ಬಿಟ್ಟಿರುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಕರ್ನಾಟಕ ಉಚ್ಚ ನ್ಯಾಯಾಲಯ ಬಿಬಿಎಂಪಿಗೆ ಆದೇಶಿಸಿದೆ. ಬೆಂಗಳೂರಿನಲ್ಲಿ ಜೋತು ಬಿದ್ದಿರುವ ಕೇಬಲ್ ಟಿವಿ, ಇಂಟರ್‌ನೆಟ್ ಮತ್ತು ಎಲೆಕ್ಟಿçಕ್ ವೈರ್ ವಿರುದ್ಧ ವಕೀಲ ಎನ್.ಪಿ. ಅಮೃತೇಶ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಮತ್ತು ಮಗದುಮ್ ಅವರನ್ನೊಳಗೊಂಡ ವಿಭಾಗೀಯ ಪೀಠ, ೧೯೯೫ರ ಕೇಬಲ್ ನೆಟ್ ವರ್ಕ್ ಕಾಯಿದೆ ಪ್ರಕಾರ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಸೂಚಿಸಿದೆ, ಕೇಬಲ್ ಕಾಯಿದೆ ಅನ್ವಯ ಕೇಬಲ್ ಆಪರೇಟರ್‌ಗಳು ಮೊದಲು ಬಿಬಿಎಂಪಿ ಅನುಮತಿ ಪಡೆಯಬೇಕು. ಅನುಮತಿ ಪಡೆಯದೆ, ಸಾರ್ವಜನಿಕ ಬೀದಿಗಳಲ್ಲಿ ಕೇಬಲ್‌ಗಳನ್ನು ಹಾಕಲು ನಿರ್ವಾಹಕರಿಗೆ ಅಧಿಕಾರವಿಲ್ಲ ಎಂದು ಹೈಕೋರ್ಟ್ ಸೂಚಿಸಿದೆ. ತೂಗಾಡುತ್ತಿರುವ ಎಲೆಕ್ಟಿçಕ್ ವೈರ್, ಟೆಲಿಪೋನ್ ವೈರ್ ಮತ್ತು ಟಿವಿ ಕೇಬಲ್ ವೈರ್‌ಗಳ ದೃಶ್ಯ ಎಲ್ಲಾ ಕಡೆ ಸಾಮಾನ್ಯವಾಗಿ ಬಿಟ್ಟಿದೆ. ಫೋಟೋಗಳನ್ನು ನೋಡಿದರೆ, ಪಾದಚಾರಿಗಳಿಗೆ ಹಾಗೂ ವಾಹನ ಸವಾರರಿಗೆ ಅಪಾಯ ಎಂಬುದು ಸ್ಪಷ್ಟವಾಗುತ್ತದೆ. ಹೀಗಾಗಿ ಇಂತವರ ವಿರುದ್ಧ ಕ್ರಮ ಕೈಗೊಳ್ಳುವುದು ಬಿಬಿಎಂಪಿ ಕರ್ತವ್ಯವಾಗಿದೆ ಎಂದು ಕೋರ್ಟ್ ತಿಳಿಸಿದೆ.

ಕ್ವಾರಿ ಮಾಲೀಕ ನಾಗರಾಜ್ ಸೇರಿ ಇಬ್ಬರ ಬಂಧನ

ಚಿಕ್ಕಬಳ್ಳಾಪುರ, ಫೆ. ೨೫: ಆರು ಮಂದಿಯನ್ನು ಬಲಿ ಪಡೆದ ಚಿಕ್ಕಬಳ್ಳಾಪುರದ ಹಿರೇನಾಗವೇರಿ ಗ್ರಾಮದಲ್ಲಿ ನಡೆದ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬAಧಿಸಿದAತೆ ಪ್ರಮುಖ ಆರೋಪಿ ಕ್ವಾರಿ ಮಾಲೀಕ ಜಿ.ಎಸ್. ನಾಗರಾಜ್ ಸೇರಿದಂತೆ ಇಬ್ಬರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ತಮಿಳುನಾಡಿನ ಹೊಸೂರಿನಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ನಾಗರಾಜ್ ಹಾಗೂ ಮತ್ತೊಬ್ಬ ಆರೋಪಿ ಗಣೇಶ್‌ನನ್ನು ಬಂಧಿಸಲಾಗಿದ್ದು, ಇದರೊಂದಿಗೆ ಬಂಧಿತರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ. ಇನ್ನು ಐವರು ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ಆರೋಪಿ ನಾಗರಾಜ್ ಸ್ಫೋಟಗೊಂಡ ಕಲ್ಲು ಕ್ವಾರಿಯ ಮಾಲೀಕನಾಗಿದ್ದು, ದಕ್ಷಿಣ ರೈಲ್ವೆ ಸಲಹಾ ಸಮಿತಿ ಸದಸ್ಯರಾಗಿದ್ದಾರೆ ಎನ್ನಲಾಗಿದೆ. ಎಂಟನೇ ಆರೋಪಿ ಗಣೇಶ್ ಜಿಲೆಟಿನ್ ಸ್ಫೋಟಕಗಳನ್ನು ಸರಬರಾಜು ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಪ್ರಕರಣಕ್ಕೆ ಸಂಬAಧಿಸಿದAತೆ ನಿನ್ನೆ ರಾಘವೇಂದ್ರ ರೆಡ್ಡಿ, ವೆಂಕಟಶಿವ ರೆಡ್ಡಿ, ಪ್ರವೀಣ್, ರಿಯಾಜ್ ಮತ್ತು ಮಧುಸೂಧನ್ ಎಂಬ ಐವರನ್ನು ಬಂಧಿಸಲಾಗಿತ್ತು. ಇಂದು ಮತ್ತೆ ಇಬ್ಬರನ್ನು ಬಂಧಿಸಲಾಗಿದೆ. ಚಿಕ್ಕಬಳ್ಳಾಪುರದ ಪೆರೇಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯ ಭ್ರಮರಾ ವಾಸಿನಿ ಸ್ಟೋನ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಿಸುತ್ತಿದ್ದ ಜೆಲ್ಲಿ ಕ್ರಷರ್‌ನಲ್ಲಿ ಸೋಮವಾರ ರಾತ್ರಿ ೧೨.೩೦ರ ಸುಮಾರಿಗೆ ದುರಂತ ಸಂಭವಿಸಿದ್ದು, ಘಟನೆಗೆ ಜಿಲೆಟಿನ್ ಕಡ್ಡಿಗಳ ಸ್ಫೋಟವೇ ಕಾರಣ ಎಂದು ತಿಳಿದುಬಂದಿದೆ.