ಗೋಣಿಕೊಪ್ಪಲು, ಫೆ. ೨೬ : ದ.ಕೊಡಗಿನಲ್ಲಿ ನರಭಕ್ಷಕ ಹುಲಿಯಿಂದ ಎರಡು ಅಮೂಲ್ಯ ಜೀವ ಕಳೆದುಹೋಗಿದೆ. ರೈತರ ಜಾನುವಾರುಗಳು ದಿನಕ್ಕೊಂದರAತೆ ಹುಲಿಯ ಆಹಾರವಾಗುತ್ತಿವೆ. ರೈತ, ಕಾರ್ಮಿಕ, ಬೆಳೆಗಾರ ತನ್ನ ಕಾಫಿ ತೋಟಕ್ಕೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ. ಹೀಗಿರುವಾಗ ರಾಜ್ಯದ ಅರಣ್ಯ ಸಚಿವರು ಜಿಲ್ಲೆಗೆ ಆಗಮಿಸಿ ನೊಂದ ಕುಟುಂಬಕ್ಕೆ ಸಾಂತ್ವನ ಹೇಳುವ ವ್ಯವದಾನ ತೋರಿಲ್ಲ ಎಂದು ವಿಧಾನಪರಿಷತ್ ಸದಸ್ಯೆ ಶಾಂತೆಯAಡ ವೀಣಾಅಚ್ಚಯ್ಯ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪೊನ್ನಂಪೇಟೆ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗಿನ ಶಾಸಕರಾದ ಕೆ.ಜಿ. ಬೋಪಯ್ಯ ಹಾಗೂ ಅಪ್ಪಚ್ಚು ರಂಜನ್ ಬೆಂಗಳೂರಿನಲ್ಲಿ ಅರಣ್ಯ ಸಚಿವರೊಂದಿಗೆ ಸಭೆ ನಡೆಸಿದ್ದಾರೆ. ಹೇಳುವ ವ್ಯವದಾನ ತೋರಿಲ್ಲ ಎಂದು ವಿಧಾನಪರಿಷತ್ ಸದಸ್ಯೆ ಶಾಂತೆಯAಡ ವೀಣಾಅಚ್ಚಯ್ಯ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪೊನ್ನಂಪೇಟೆ ಪ್ರವಾಸಿ ಮಂದಿರದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗಿನ ಶಾಸಕರಾದ ಕೆ.ಜಿ. ಬೋಪಯ್ಯ ಹಾಗೂ ಅಪ್ಪಚ್ಚು ರಂಜನ್ ಬೆಂಗಳೂರಿನಲ್ಲಿ ಅರಣ್ಯ ಸಚಿವರೊಂದಿಗೆ ಸಭೆ ನಡೆಸಿದ್ದಾರೆ. ಆಹ್ವಾನಿಸಿ ಸಾರ್ವಜನಿಕ, ಸಂಘ, ಸಂಸ್ಥೆಯ ಮುಖಂಡರೊAದಿಗೆ ಸಭೆ ಅಯೋಜಿಸಬೇಕಾದ ಅನಿವಾರ್ಯತೆ ಇದ್ದರೂ ಶಾಸಕರು ಮಾತ್ರ ಮೌನ ವಹಿಸಿರುವುದು ಸರಿಯಲ್ಲ. ಕೂಡಲೇ ಕೊಡಗಿಗೆ ಅರಣ್ಯ ಸಚಿವರು ಆಗಮಿಸಿ ಹುಲಿ ಸೆರೆಹಿಡಿಯಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆ ನಡೆಸಬೇಕು ಎಂದು ಒತ್ತಾಯ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷÀ ಮೀದೇರಿರ ನವೀನ್, ಮುಖಂಡರಾದ ಕೊಲ್ಲಿರ ಬೋಪಣ್ಣ, ಆಪಟ್ಟೀರ ಟಾಟು ಮೊಣ್ಣಪ್ಪ, ಕಡೇಮಾಡ ಕುಸುಮ, ಮತ್ರಂಡ ದಿಲ್ಲು ಉಪಸ್ಥಿತರಿದ್ದರು.
ಹೆಚ್.ಕೆ.ಜಗದೀಶ್