ಮಡಿಕೇರಿ, ಫೆ. ೨೬: ಅಕಾಲಿಕ ಮಳೆ, ವನ್ಯಜೀವಿ-ಮಾನವ ಸಂಘರ್ಷ, ಪ್ರಾಕೃತಿಕ ವಿಕೋಪದಿಂದ ಕಂಗಾಲಾಗಿರುವ ಕೊಡಗಿಗೆ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಕಾಂಗ್ರೆಸ್ ಪಕ್ಷದ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ವೀಕ್ಷಕ ಟಿ.ಎಂ.ಶಾಹಿದ್ ಒತ್ತಾಯಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕಾಡಾನೆ, ಹುಲಿ ದಾಳಿ ನಿರಂತರವಾಗಿ ನಡೆಯುತ್ತಿದೆ. ಸಮಸ್ಯೆ ಪರಿಹರಿಸಬೇಕಾದ ಸರಕಾರ ತನ್ನ ಕರ್ತವ್ಯವನ್ನು ಮರೆತು ದಂಧೆ ನಡೆಸುತ್ತಿದೆ. ಅರಣ್ಯ ಇಲಾಖೆ ಭ್ರಷ್ಟಾಚಾರದ ಕೂಪವಾಗಿದೆ. ಬದ್ಧತೆ ಇರುವ ಅಧಿಕಾರಿಗಳನ್ನು ಸೂಕ್ತ ಸ್ಥಳಕ್ಕೆ ನೇಮಕ ಮಾಡಿಲ್ಲ. ಅಧಿಕಾರಿಗಳ ನೇಮಕಾತಿಯಲ್ಲಿ ಸರ್ಕಾರ ದಂಧೆ ಮಾಡುತ್ತಿದೆ. ಕೊಡಗಿನಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದೆ ಇದನ್ನು ಮಡಿಕೇರಿ, ಫೆ. ೨೬: ಅಕಾಲಿಕ ಮಳೆ, ವನ್ಯಜೀವಿ-ಮಾನವ ಸಂಘರ್ಷ, ಪ್ರಾಕೃತಿಕ ವಿಕೋಪದಿಂದ ಕಂಗಾಲಾಗಿರುವ ಕೊಡಗಿಗೆ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಕಾಂಗ್ರೆಸ್ ಪಕ್ಷದ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ವೀಕ್ಷಕ ಟಿ.ಎಂ.ಶಾಹಿದ್ ಒತ್ತಾಯಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕಾಡಾನೆ, ಹುಲಿ ದಾಳಿ ನಿರಂತರವಾಗಿ ನಡೆಯುತ್ತಿದೆ. ಸಮಸ್ಯೆ ಪರಿಹರಿಸಬೇಕಾದ ಸರಕಾರ ತನ್ನ ಕರ್ತವ್ಯವನ್ನು ಮರೆತು ದಂಧೆ ನಡೆಸುತ್ತಿದೆ. ಅರಣ್ಯ ಇಲಾಖೆ ಭ್ರಷ್ಟಾಚಾರದ ಕೂಪವಾಗಿದೆ. ಬದ್ಧತೆ ಇರುವ ಅಧಿಕಾರಿಗಳನ್ನು ಸೂಕ್ತ ಸ್ಥಳಕ್ಕೆ ನೇಮಕ ಮಾಡಿಲ್ಲ. ಅಧಿಕಾರಿಗಳ ನೇಮಕಾತಿಯಲ್ಲಿ ಸರ್ಕಾರ ದಂಧೆ ಮಾಡುತ್ತಿದೆ. ಕೊಡಗಿನಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದೆ ಇದನ್ನು ಮಾಡುತ್ತಿದೆ. ಪಿ.ಎಫ್.ಐ., ಎಸ್.ಡಿ.ಪಿ.ಐ ನ್ನು ನಿಷೇಧಿಸುತ್ತೇವೆ ಎಂದು ಬಾಯಿ ಮಾತಿಗೆ ಬಿಜೆಪಿ ಹೇಳುತ್ತಿದೆ. ಆದರೆ, ಪರೋಕ್ಷವಾಗಿ ಅವರು ಒಂದಾಗಿ ಚುನಾವಣೆ ಎದುರಿಸುತ್ತಿದ್ದಾರೆ ಎಂದು ದೂರಿದರು.

ಕೊಡಗು ಜಿಲ್ಲಾ ಕಾಂಗ್ರೆಸ್ ಯಾವುದೇ ರೀತಿಯ ಭಿನ್ನಮತವಿಲ್ಲ ಕೆಲವರಲ್ಲಿ ಭಿನ್ನಾಭಿಪ್ರಾಯವಿದೆ. ಜಿಲ್ಲಾಧ್ಯಕ್ಷರ ಬದಲಾವಣೆ ಸಧ್ಯಕ್ಕಿಲ್ಲ ಎಂದು ಸ್ಪಷ್ಟಪಡಿಸಿದರು.

ಧ್ರುವ ನಾರಾಯಣ್ ನೇಮಕ :

ಧ್ರುವ ನಾರಾಯಣ್ ಅವರನ್ನು ಜಿಲ್ಲೆಯ ಕಾಂಗ್ರೆಸ್ ಉಸ್ತುವಾರಿ ಯನ್ನಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇಮಕ ಮಾಡಿದ್ದಾರೆ ಎಂದು ಶಾಹಿದ್ ತಿಳಿಸಿದರು.

ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಸನ್ನದವಾಗಿದ್ದು ಮುಂಬರುವ ಜಿಲ್ಲಾ, ತಾಲೂಕು ಪಂಚಾಯ್ತಿ ನಗರಸಭೆ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ವಿ.ಪಿ ಸುರೇಶ್, ಸದಸ್ಯ ಪುಷ್ಪ ಪೂಣಚ್ಚ, ಮಡಿಕೇರಿ ತಾಲೂಕು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಖಲೀಲ್ ಬಾಷ, ಎಸ್ಸಿ ಘಟಕದ ಅಧ್ಯಕ್ಷ ಮುದ್ದುರಾಜ್, ಮಹಿಳಾ ಘಟಕದ ಅಧ್ಯಕ್ಷೆ ಫ್ಯಾನ್ಸಿ ಪಾರ್ವತಿ ಇದ್ದರು.