ಗೋಣಿಕೊಪ್ಪಲು, ಫೆ. ೨೭: ರೂ. ೯೮ ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಓವರ್‌ಹೆಡ್ ಟ್ಯಾಂಕ್ ನಿರ್ಮಾಣಕ್ಕೆ ಪೊನ್ನಂಪೇಟೆ ಗ್ರಾಮ ಪಂಚಾಯಿತಿ ಸದಸ್ಯರಾದ ಅಮ್ಮತ್ತಿರ ಸುರೇಶ್, ಮೂಕಳೇರ ಲಕ್ಷö್ಮಣ್, ಜಯಲಕ್ಷ್ಮಿ ಹಾಗೂ ಗ್ರಾಮಸ್ಥರು ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭ ಮಾತನಾಡಿದ ಗ್ರಾ.ಪಂ. ಸದಸ್ಯ ಅಮ್ಮತ್ತೀರ ಸುರೇಶ್, ಎರಡನೇ ವಾರ್ಡ್ ಹಾಗೂ ನೆಹರು ನಗರದಲ್ಲಿರುವ ನಾಗರಿಕರು ಅನೇಕ ವರ್ಷಗಳಿಂದ ಕುಡಿಯುವ ನೀರಿನ ಅಭಾವ ಎದುರಿಸುತ್ತಿದ್ದರು. ಇದೀಗ ಶಾಸಕ ಕೆ.ಜಿ. ಬೋಪಯ್ಯ ಹಾಗೂ ಪಂಚಾಯಿತಿ ಸರ್ವ ಸದಸ್ಯರ ಒಪ್ಪಿಗೆ ಮೇರೆ ದೊಡ್ಡ ಮೊತ್ತದ ಹಣವನ್ನು ವಿನಿಯೋಗ ಮಾಡಲಾಗಿದೆ. ಇದರಿಂದ ೪೫೦ ಮನೆಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಲಭ್ಯವಾಗಲಿದೆ ಎಂದು ತಿಳಿಸಿದರು.