ಸೋಮವಾರಪೇಟೆ, ಫೆ. ೨೬: ತಾಲೂಕಿನ ಕೂಡಿಗೆ ಜರ್ಸಿ ತಳಿ ಸಂವರ್ಧನಾ ಮತ್ತು ತರಬೇತಿ ಕೇಂದ್ರಕ್ಕೆ ಪಶುಸಂಗೋಪನಾ ಮತ್ತು ಮೀನುಗಾರಿಕೆ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಡಾ. ಜಿ. ಕಲ್ಪನ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಂತರ ನಡೆದ ಪಶು ಸಂಗೋಪನಾ ಮತ್ತು ಮೀನುಗಾರಿಕೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾಹಿತಿ ಪಡೆದರು. ಇಲಾಖೆಯ ವಿವಿಧ ಯೋಜನೆಗಳನ್ನು ರೈತರಿಗೆ ತಲುಪಿಸುವ ಜವಾಬ್ದಾರಿ ಇಲಾಖೆಯ ಅಧಿಕಾರಿಗಳಿಗಿದ್ದು, ಸಂಶೋಧನಾ ಸಂಸ್ಥೆಗಳಲ್ಲಾದ ಹೊಸ ಹೊಸ ತಂತ್ರಜ್ಞಾನಗಳನ್ನು ರೈತರಿಗೆ ಪರಿಚಯಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಕೂಡಿಗೆ ಜರ್ಸಿ ತಳಿ ಸಂವರ್ಧನಾ ಕೇಂದ್ರದ ಉಪನಿರ್ದೇಶಕರಾದ ಕೃಷ್ಣಮೂರ್ತಿ, ಮಡಿಕೇರಿ ಪಶುಪಾಲನಾ ಇಲಾಖೆಯ ಉಪನಿರ್ದೇಶಕರುಗಳಾದ ಆನಂದ್, ಸುರೇಶ್, ಸೋಮವಾರಪೇಟೆ ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ವಿ.ಬದಾಮಿ, ಮೀನುಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಕೆ.ಟಿ. ದರ್ಶನ್, ಸಹಾಯಕ ನಿರ್ದೇಶಕಿ ಎ.ಪಿ. ಸ್ನೇಹ ಉಪಸ್ಥಿತರಿದ್ದರು.