ಮಡಿಕೇರಿ, ಫೆ. ೨೭: ಇತ್ತೀಚೆಗೆ ಗುವಾಹಟಿಯಲ್ಲಿ ನಡೆದ ೧೬ ವರ್ಷದೊಳಗಿನ ರಾಷ್ಟಿçÃಯ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಎರಡು ರಾಷ್ಟಿçÃಯ ದಾಖಲೆಯೊಂದಿಗೆ ಹರ್ಡಲ್ಸ್ನಲ್ಲಿ ಪ್ರಥಮ ಸ್ಥಾನಗಳಿಸಿ ಸಾಧನೆ ಮಾಡಿರುವ ಕೊಡಗಿನ ಉದಯೋನ್ಮುಖ ಕ್ರೀಡಾ ಪ್ರತಿಭೆ ಬೊಳ್ಳಂಡ ಉನ್ನತಿ ಅಯ್ಯಪ್ಪ ಇದೀಗ ಮತ್ತೊಂದು ಸಾಧನೆ ಮಾಡಿದ್ದಾಳೆ. ಕೇರಳದ ಕ್ಯಾಲಿಕಟ್‌ನಲ್ಲಿ ನಡೆಯುತ್ತಿರುವ ದಕ್ಷಿಣ ವಲಯ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಉನ್ನತಿ ಅಯ್ಯಪ್ಪ ೮೦ ಮೀರ‍್ಸ್ ಹರ್ಡಲ್ಸ್ನಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ. ತಾ. ೨೮ರಂದು (ಇಂದು) ೩೦೦ ಮೀಟರ್ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಈಕೆ ಪ್ರತಿನಿಧಿಸಲಿದ್ದಾಳೆ.