ಮಡಿಕೇರಿ, ಫೆ. ೨೬: ಕರ್ನಾಟಕ ಬಾಲ ವಿಕಾಸ ಅಕಾಡೆಮಿ, ಕರ್ನಾಟಕ ಸರ್ಕಾರ ಇವರು ಕೊಡಮಾಡುವ ೨೦೨೦-೨೧ನೇ ಅಕಾಡೆಮಿ ಬಾಲ ಗೌರವ ಪ್ರಶಸ್ತಿಗೆ ವೀರಾಜಪೇಟೆಯ ಬಾಲ ಕಲಾವಿದ ಆಯುಷ್ ಎಂ.ಡಿ. ಆಯ್ಕೆಯಾಗಿದ್ದಾರೆ. ಧಾರವಾಡ ದಲ್ಲಿ ತಾ. ೨೮ ರಂದು ಜರುಗಲಿರುವ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಪ್ರಸ್ತುತ ಆಯುಷ್ ಮಂಗಳೂರಿನ ಎಕ್ಸ್ಪರ್ಟ್ ಕಾಲೇಜ್‌ನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ.