ಕುಶಾಲನಗರ, ಫೆ.೨೭: ಕುಶಾಲನಗರ ಸರಕಾರಿ ಇಂಜಿನಿಯರಿAಗ್ ಮತ್ತು ಪಾಲಿಟೆಕ್ನಿಕ್ ಕಾಲೇಜುಗಳ ಇಬ್ಬರು ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.ಪಾಲಿಟೆಕ್ನಿಕ್ ಹಾಸ್ಟೆಲ್ನಲ್ಲಿ ತಂಗಿದ್ದ ವಿದ್ಯಾರ್ಥಿಗಳಲ್ಲಿ ಕೊರೊನಾ ಕಂಡು ಬಂದ ಬೆನ್ನಲ್ಲೇ ೮೦ ವಿದ್ಯಾರ್ಥಿಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ವರದಿ ಇನ್ನಷ್ಟೇ ಬರಬೇಕಿದ್ದು, ಎರಡೂ ಸಂಸ್ಥೆಯ ೧೭೦೦ ಕ್ಕೂ ಅಧಿಕ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಆತಂಕಕ್ಕೆ ಒಳಗಾಗಿದ್ದಾರೆ. ಶುಕ್ರವಾರದಿಂದ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ತರಗತಿಗಳಿಗೆ ಹಾಜರಾಗುವುದನ್ನು ನಿರ್ಬಂಧಿಸಲಾಗಿದೆ. ಹಾಸ್ಟೆಲ್ನಿಂದ ಹೊರ ಹೋಗದಂತೆ ಎಚ್ಚರವಹಿಸಲಾಗಿದೆ ಎಂದು ಕಾಲೇಜಿನ ಮಾಹಿತಿ ತಿಳಿಸಿದೆ.