ಕೂಡಿಗೆ, ಫೆ. ೨೭: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭುವನಗಿರಿ ಗ್ರಾಮದಲ್ಲಿರುವ ಕುಶಾಲನಗರದ ಪಟ್ಟಣ ಪಂಚಾಯಿತಿಯ ಕಸ ವಿಲೇವಾರಿ ಘಟಕದ ಸ್ಥಳಕ್ಕೆ ಕೂಡಿಗೆ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಮತ್ತು ಅಧಿಕಾರಿ ವರ್ಗದವರು ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ಪರಿಶೀಲನೆ ಮಾಡಿದರು.

ಸ್ಥಳೀಯ ಗ್ರಾಮಸ್ಥರ ದೂರಿನ ಮೇರೆಗೆ ಗ್ರಾಮ ಪಂಚಾಯಿತಿ ಸಭೆಯಲ್ಲಿ ಚರ್ಚಿಸಲಾಗಿ ನಂತರ ಸ್ಥಳಕ್ಕೆ ಭೇಟಿ ನೀಡಿ ದುರ್ವಾಸನೆ ಮತ್ತು ಪ್ಲಾಸ್ಟಿಕ್ ಹಾರಾಡುತ್ತಿ ರುವುದನ್ನು ವೀಕ್ಷಣೆ ಮಾಡಿದರು. ನಂತರ ಕ್ರಮಕೈಗೊಳ್ಳುವ ಬಗ್ಗೆ ಮಾಹಿತಿಯನ್ನು ಗ್ರಾಮ ಪಂಚಾಯಿತಿ ಯಲ್ಲಿ ಚರ್ಚಿಸಿ ನಂತರ ವ್ಯವಸ್ಥೆ ಯನ್ನು ಸರಿಪಡಿಸಲು ಕುಶಾಲನಗರ ಪಟ್ಟಣ ಪಂಚಾಯಿತಿ ಪತ್ರವ್ಯವಹಾರ ಮಾಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಯಿತು. ಈ ಸಂದರ್ಭ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಟಿ.ಪಿ. ಹಮೀದ್, ಅರುಣಕುಮಾರ್. ಶಿವಕುಮಾರ್ ಸೇರಿದಂತೆ ಸರ್ವ ಸದಸ್ಯರು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಯಿಷಾ, ಕಾರ್ಯದರ್ಶಿ ಶಿಲ್ಪಾ ಹಾಜರಿದ್ದರು.