ಮಡಿಕೇರಿ,ಫೆ.೨೬: ಕಾರ್ಮಿಕರ ಆರೋಗ್ಯದ ಹಿತದೃಷ್ಠಿಯಿಂದ ಸರ್ಕಾರದ ವತಿಯಿಂದ ಸುಮಾರು ೧೦೦ ಹಾಸಿಗೆಗಳುಳ್ಳ ಸುಸಜ್ಜಿತ ಇಎಸ್ಐ ಆಸ್ಪತ್ರೆಯನ್ನು ಸ್ಥಾಪನೆ ಮಾಡಿದಲ್ಲಿ ಕಾರ್ಮಿಕರಿಗೆ ಅನುಕೂಲವಾಗುತ್ತದೆ. ಪ್ರಸ್ತುತ ಕೊಡಗು ಜಿಲ್ಲೆಯಲ್ಲಿ ಯಾವುದೇ ಇಎಸ್ಐ ಆಸ್ಪತ್ರೆಗಳು ಇರುವುದಿಲ್ಲ. ಕೊಡಗು ಜಿಲ್ಲೆಯ ಕುಶಾಲನಗರ ಸಮೀಪ ಒಂದು ಕಾರ್ಮಿಕ ರಾಜ್ಯ ವಿಮಾ(ಇಎಸ್ಐ) ಆಸ್ಪತ್ರೆಯನ್ನು ಮಂಜೂರು ಮಾಡಿಕೊಡುವಂತೆ ಸಂಸದ ಪ್ರತಾಪ್ ಸಿಂಹ ಕಾರ್ಮಿಕ ಮಂಜೂರು ಮಾಡಿಕೊಡುವಂತೆ ಸಂಸದ ಪ್ರತಾಪ್ ಸಿಂಹ ಕಾರ್ಮಿಕ ಮಂಜೂರು ಮಾಡಿಕೊಡುವಂತೆ ಸಂಸದ ಪ್ರತಾಪ್ ಸಿಂಹ ಕಾರ್ಮಿಕ ಕೊಡಗಿನ ಕುಶಾಲನಗರದಲ್ಲಿ ೧೦೦ ಹಾಸಿಗೆಗಳ ಇಎಸ್ಐ ಆಸ್ಪತ್ರೆ ತೆರೆಯುವಂತೆ ಕಾರ್ಮಿಕ ಖಾತೆ ಸಚಿವ ಶಿವರಾಮ್ ಹೆಬ್ಬಾರರಿಗೆ ಮನವಿ ಮಾಡಿಕೊಂಡಾಗ ಸಕರಾತ್ಮಕ ಸ್ಪಂದನ ಸಿಕ್ಕಿದೆ ಎಂದು ಸಂಸದರು ತಿಳಿಸಿದ್ದಾರೆ.
ಕುಶಾಲನಗರ ತಾಲೂಕು ಕೂಡ್ಲೂರು ಗ್ರಾಮದ ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿಯ(ಕೆಐಎಡಿಬಿ) ವ್ಯಾಪ್ತಿಗೆ ಬರುವ ಸುಮಾರು ೧೨೦ ಅತೀ ಸಣ್ಣ, ಮಧ್ಯಮ
(ಮೊದಲ ಪುಟದಿಂದ) ಮತ್ತು ಬೃಹತ್ ಕೈಗಾರಿಕೆಗಳಲ್ಲಿ ಸುಮಾರು ೪,೫೦೦ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದು,
ಕಾರ್ಮಿಕರ ಆರೋಗ್ಯದ ಹಿತದೃಷ್ಟಿಯಿಂದ ಕಾರ್ಮಿಕ ರಾಜ್ಯ ವಿಮಾ(ಇಎಸ್ಐ) ಆಸ್ಪತ್ರೆಯನ್ನು ತೆರೆಯುವ ಅತ್ಯಾವಶ್ಯಕತೆ ಇದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಖಾನೆಗಳು, ಕೈಗಾರಿಕೆಗಳ ಸ್ಥಾಪನೆಯಾಗು ವುದರಿಂದ ದುಡಿಯುವ ಕಾರ್ಮಿಕರ ಸಂಖ್ಯೆಯು ಹೆಚ್ಚುತ್ತದೆ ಎಂದು ಮನವಿಯಲ್ಲಿ ಕೋರಲಾಗಿದೆ.