ಮಡಿಕೇರಿ, ಫೆ. ೨೭: ನಗರದ ನಾಲ್ಕು ಶಕ್ತಿದೇವತೆಗಳಲ್ಲಿ ಒಂದಾದ ಶ್ರೀ ದಂಡಿನ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಎರಡು ದಿನಗಳ ಕಾಲ ವಿವಿಧ ಪೂಜಾ ಕೈಂಕರ್ಯಗಳೊAದಿಗೆ ಶ್ರದ್ಧಾಭಕ್ತಿಯಿಂದ ಜರುಗಿತು.
ತಾ. ೨೬ ರಂದು ಪ್ರಸಾದ ಸಿದ್ಧಿ, ರಾಕ್ಷೆÆÃಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜೆ, ವಿಷ್ಣು ಪೂಜೆ, ದಿಶಾ ಬಲಿ ನಂತರ ಮಹಾಮಂಗಳಾರತಿ ನಡೆಯಿತು. ಇಂದು ಗಣಪತಿ ಹೋಮ, ಕಲಶ ಪೂಜೆ, ಕಲಶಾಭಿಷೇಕ, ನಾಗದೇವರಿಗೆ ಪಂಚಾಮೃತಾಭಿಷೇಕ, ನಾಗ ಪೂಜೆ, ದೇವಿಗೆ ಅಲಂಕಾರ ಪೂಜೆ ಜರುಗಿತು. ೧೨ ಗಂಟೆಗೆ ಮಹಾಪೂಜೆ ನಡೆಯಿತು. ನಂತರ ಭಕ್ತಾಧಿಗಳಿಗೆ ಅನ್ನ ಸಂತರ್ಪಣೆ ನಡೆಯಿತು.
ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀದೇವಿಯ ಕೃಪೆಗೆ ಪಾತ್ರರಾದರು. ದೇವಾಲಯದ ಆಡಳಿತ ಮಂಡಳಿಯ ಪ್ರಮುಖರು ಪಾಲ್ಗೊಂಡಿದ್ದರು.