ಕೂಡಿಗೆ, ಫೆ. ೨೭: ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಸರಗೋಡು ಗ್ರಾಮದ ಸರ್ವೆ ನಂಬರ್ ೨೮/೭ ರ ಗ್ರಾಮ ಪಂಚಾಯಿತಿ ಮಾಸಿಕ ಸಭೆಯ ತೀರ್ಮಾನದಂತೆ ಕಸ ವಿಲೇವಾರಿ ಘಟಕವನ್ನು ತೆರೆಯಲು ಕಾದಿರಿಸಲಾಗಿದೆ. ಜಿಲ್ಲಾಧಿಕಾರಿಗಳ ಅದೇಶದಂತೆ ಸರ್ವೆ ಇಲಾಖೆಯ ವತಿಯಿಂದ ಸರ್ವೆ ನಡೆಸಲು ಮುಂದಾದಾಗÀ ಗ್ರಾಮಸ್ಥರಿಂದ ಆಕ್ಷೇಪದಿಂದಾಗಿ ಸರ್ವೆ ಕಾರ್ಯ ಸ್ಥಗಿತಗೊಂಡಿತು.
ಕಳೆದ ಎರಡು ವರ್ಷಗಳ ಹಿಂದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಸರಗೋಡು ಗ್ರಾಮದ ಪೈಸಾರಿ ಜಾಗದ ಸರ್ವೆ ನಂಬರ್ ೨೮/೭ರಲ್ಲಿ ಕಸ ವಿಲೇವಾರಿ ಘಟಕವನ್ನು ಪ್ರಾರಂಭಿಸಲು ಗ್ರಾಮ ಪಂಚಾಯಿತಿ ಸಭೆಯಲ್ಲಿ ನಡವಳಿಕೆಯಾಗಿದ್ದು, ಅದರ ಅನ್ವಯ ಕಂದಾಯ ಇಲಾಖೆಯ ಮೂಲಕ ಜಾಗವನ್ನು ಗುರುತು ಮಾಡಲಾಗಿದೆ. ಅದರೆ ಅದರ ಗಡಿಗಳನ್ನು ಸರ್ವೆ ಇಲಾಖೆಯ ವತಿಯಿಂದ ಗುರುತಿಸಲು ಜಿಲ್ಲಾಧಿಕಾರಿಗಳಿಂದ ಆದೇಶವಾಗಿದೆ. ಆದರೆ ಸ್ಥಳೀಯ ಗ್ರಾಮಸ್ಥರು ಸರ್ವೆಗೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸರ್ವೆ ಕಾರ್ಯ ಸ್ಥಗಿತಗೊಂಡಿತು. ಈ ಸಂದರ್ಭದಲ್ಲಿ ತಾಲೂಕು ಸರ್ವೆ ಅಧಿಕಾರಿ ರಾಜಮುಡಿ, ಸಹಾಯಕ ರವಿಕುಮಾರ್ ಸೇರಿದಂತೆ ಹೆಬ್ಬಾಲೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಖೇಶ್ ಮತ್ತು ಸಿಬ್ಬಂದಿ ವರ್ಗದವರು ಹಾಜರಿದ್ದರು.