ಸುಂಟಿಕೊಪ್ಪ, ಫೆ. ೨೮: ಸುಂಟಿಕೊಪ್ಪ ಹೋಬಳಿ ರೈತ ಸಂಪರ್ಕ ಕೇಂದ್ರ ನೂತನ ಕಚೇರಿಯ ಉದ್ಘಾಟನೆಯನ್ನು ತಾ. ೨ ರಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ನೇರವೇರಿಸಲಿರುವರು.

ಅಧ್ಯಕ್ಷತೆಯನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ವಹಿಸಲಿದ್ದು, ವಸತಿ ಸಚಿವರೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರು ಆಗಮಿಸಲಿದ್ದಾರೆ. ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಿ.ಎ. ಹರೀಶ, ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಶಾಸಕರುಗಳಾದ ಎಸ್.ಎಲ್. ಬೊಜೇಗೌಡ, ಆಯನೂರು ಮಂಜುನಾಥ, ಕೊಡಗು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷೆ ಆರ್. ಮಂಜುಳ, ಜಿ.ಪಂ. ಸದಸ್ಯರುಗಳಾದ ಕುಮುದ ಧರ್ಮಪ್ಪ, ಪಿ.ಎಂ. ಲತೀಫ್, ಕೆ.ಪಿ. ಚಂದ್ರಕಲಾ, ಎಂ.ಬಿ. ಸುನೀತಾ, ಸೋಮವಾರಪೇಟೆ ತಾ.ಪಂ. ಅಧ್ಯಕ್ಷೆ ಪುಷ್ಪಾ ರಾಜೇಶ್, ತಾ.ಪಂ. ಉಪಾಧ್ಯಕ್ಷ ಅಭಿಮನ್ಯು ಕುಮಾರ್, ಸುಂಟಿಕೊಪ್ಪ ಗ್ರಾ.ಪಂ. ಅಧ್ಯಕ್ಷೆ ಶಿವಮ್ಮ, ತಾಲೂಕು ಪಂಚಾಯಿತಿ ಸದಸ್ಯರುಗಳಾದ ಬಲ್ಲಾರಂಡ ಮಣಿಉತ್ತಪ್ಪ, ಓಡಿಯಪ್ಪನ ವಿಮಲಾವತಿ, ಬಿಜು ಚಂಗಪ್ಪ, ಹೆಚ್.ಡಿ. ಮಣಿ, ಸೋಮವಾರಪೇಟೆ ತಾಲೂಕು ಕೃಷಿ ಸಮಾಜದ ಅಧ್ಯಕ್ಷ ಎಸ್.ಪಿ. ಪೊನ್ನಪ್ಪ ಪಾಲ್ಗೊಳ್ಳಲಿದ್ದಾರೆ ಎಂದು ಕೃಷಿ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ವಿಶೇಷ ಆಹ್ವಾನಿತರಾಗಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಕೊಡಗು ಜಿ.ಪಂ. ಸಿಇಓ ಭನ್ವರ್‌ಸಿಂಗ್ ಮೀನಾ, ಜಿಲ್ಲಾಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕ ಶಬಾನ ಎಂ. ಶೇಕ್, ಉಪಕೃಷಿ ಇಲಾಖೆ ನಿರ್ದೇಶಕ ಕೆ. ರಾಜು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.