ಮಡಿಕೇರಿ, ಏ. ೨ : ಮಡಿಕೇರಿ ನಗರಸಭೆಯ ಎಲ್ಲಾ ೨೩ ವಾರ್ಡ್ಗಳ ಸಾರ್ವತ್ರಿಕ ಚುನಾವಣೆ ಪ್ರಕಟವಾಗಿರುವ ಹಿನ್ನೆಲೆ ಕಾಂಗ್ರೆಸ್ ಪಕ್ಷದಿಂದ ಎಲ್ಲಾ ವಾರ್ಡ್ಗಳಿಗೆ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ನೂತನ ಸಮಿತಿಯನ್ನು ರಚಿಸಲಾಗಿದೆ.
ಸಮಿತಿ ಅಧ್ಯಕ್ಷರಾಗಿ ಮಾಜಿ ಸಚಿವ ಎನ್.ಚೆಲುವರಾಯಸ್ವಾಮಿ, ಸಹ ಅಧ್ಯಕ್ಷರಾಗಿ ಮಾಜಿ ಶಾಸಕ ವಾಸು ಹಾಗೂ ಸಂಯೋಜಕರಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಕೆ.ಮಂಜುನಾಥ ಕುಮಾರ್ ಕಾರ್ಯ ನಿರ್ವಹಿಸಲಿದ್ದಾರೆ.
ಸದಸ್ಯರುಗಳಾಗಿ ಎಂಎಲ್‌ಸಿ ವೀಣಾ ಅಚ್ಚಯ್ಯ, ಮಾಜಿ ಸಚಿವರುಗಳಾದÀ ಎಂ.ಸಿ.ನಾಣಯ್ಯ, ಬಿ.ಎ.ಜೀವಿಜಯ, ಹುಣಸೂರು ಕ್ಷೇತ್ರದ ಶಾಸಕ ಹೆಚ್.ಪಿ.ಮಂಜುನಾಥ್, ಕೆಪಿಸಿಸಿ ಮಾಜಿ ಉಪಾಧ್ಯಕ್ಷ ಮಿಟ್ಟು ಚಂಗಪ್ಪ, ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಕೆ.ಎಂ.ಇಬ್ರಾಹಿA, ಕೆ.ಪಿ.ಚಂದ್ರಕಲಾ ಪ್ರಸನ್ನ, ಮಂಜುಳ ರಾಜ್, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷರುಗಳಾದÀ ಶಿವು ಮಾದಪ್ಪ, ಟಿ.ಪಿ.ರಮೇಶ್, ಪ್ರಮುಖ ಹೆಚ್.ಎಸ್.ಚಂದ್ರಮೌಳಿ, ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಎ.ಎಸ್.ಪೊನ್ನಣ್ಣ, ವೀರಾಜಪೇಟೆ ಕ್ಷೇತ್ರದ ಉಸ್ತುವಾರಿ ಟಿ.ಎಂ.ಶಾಹಿದ್, ಮಡಿಕೇರಿ ಕ್ಷೇತ್ರದ ಉಸ್ತುವಾರಿ ಎಂ.ವೆAಕಪ್ಪ ಗೌಡ ನೇಮಕ ಗೊಂಡಿದ್ದಾರೆ.
ವಿಶೇಷ ಆಹ್ವಾನಿತರಾಗಿ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ಹಾನಗಲ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುರಯ್ಯ ಅಬ್ರಾರ್, ಎನ್‌ಎಸ್‌ಯುಐ ಅಧ್ಯಕ್ಷ ತ್ರಿನೇಶ್, ಕಾಂಗ್ರೆಸ್ ಸೇವಾದಳ ಅಧ್ಯಕ್ಷ ಸಿ.ಎಂ.ಕಾವೇರಪ್ಪ ಕಾರ್ಯ ನಿರ್ವಹಿಸಲಿದ್ದಾರೆ. ಈ ಸಮಿತಿ ಮಡಿಕೇರಿ ನಗರಸಭೆ ವ್ಯಾಪ್ತಿಯ ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ವಿಧಾನ ಪರಿಷತ್ ಸದಸ್ಯರು, ನಾಯಕರು ಹಾಗೂ ಕಾರ್ಯಕರ್ತರ ಅಭಿಪ್ರಾಯ ವನ್ನು ಸಂಗ್ರಹಿಸಿ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್ ತಿಳಿಸಿದ್ದಾರೆ.