ಶನಿವಾರಸAತೆ: ಸಮೀಪದ ಕೊಡ್ಲಿಪೇಟೆ ಕಿರಿಕೊಡ್ಲಿಮಠದ ಸದಾಶಿವ ಸ್ವಾಮೀಜಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಶಿವಕುಮಾರ ಸ್ವಾಮೀಜಿಯವರ ೧೧೪ನೇ ಜನ್ಮ ದಿನಾಚರಣೆಯನ್ನು ಸರಳವಾಗಿ ಭಕ್ತಿಪೂರ್ವಕವಾಗಿ ಆಚರಿಸಲಾಯಿತು.ಎಸ್.ಜಿ.ಎಸ್. ವಿದ್ಯಾಪೀಠದ ಸಂಸ್ಥಾಪಕ ಅಧ್ಯಕ್ಷ ಸದಾಶಿವ ಸ್ವಾಮೀಜಿ ಅಧ್ಯಕ್ಷತೆ ವಹಿಸಿ ಶಿವಕುಮಾರ ಸ್ವಾಮೀಜಿಯವರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿಯವರ ದಿನಚರಿಯನ್ನು ಸ್ಮರಿಸಿದರು. ಕಾರ್ಯದರ್ಶಿ ನಂಜುAಡ, ನಿರ್ದೇಶಕ ಬಸವರಾಜು, ಕಾಲೇಜಿನ ಪ್ರಾಂಶುಪಾಲೆ ತನುಜಾ, ಮಠದ ಭಕ್ತರಾದ ಜಗದೀಶ್, ಸಂದೇಶ್, ಉಪನ್ಯಾಸಕರು, ಶಿಕ್ಷಕರು, ಸಿಬ್ಬಂದಿ ಹಾಜರಿದ್ದರು.ಸೋಮವಾರಪೇಟೆ: ತ್ರಿವಿಧ ದಾಸೋಹಿ ಸಿದ್ಧಗಂಗಾ ಮಠಾಧೀಶರಾಗಿದ್ದ ಶ್ರೀ ಶಿವಕುಮಾರ ಸ್ವಾಮೀಜಿಗಳ ಜನ್ಮ ದಿನಾಚರಣೆ ಹಾಗೂ ಸಂಸ್ಮರಣೆ ಕಾರ್ಯಕ್ರಮ ಇಲ್ಲಿನ ಗಣಪತಿ ದೇವಾಲಯದಲ್ಲಿ ನಡೆಯಿತು.
ಜಿಲ್ಲಾ ಶರಣ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಎಸ್. ಮಹೇಶ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ, ಶ್ರೀಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಇದರೊಂದಿಗೆ ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿಗಳ ಸಾಮಾಜಿಕ ಕಾರ್ಯಗಳ ಬಗ್ಗೆ ಸ್ಮರಿಸಲಾಯಿತು.
ಈ ಸಂದರ್ಭ ಮಾತನಾಡಿದ ಎಸ್. ಮಹೇಶ್ ತಾ.೨೦ ರಂದು ಸೋಮವಾರಪೇಟೆಯ ಕೊಡವ ಸಮಾಜದಲ್ಲಿ ಶಿವಕುಮಾರ ಸ್ವಾಮೀಜಿಗಳ ಬದುಕಿನ ಬಗ್ಗೆ ಬೆಳಕು ಚೆಲ್ಲುವ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಗುರುವಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಈ ಸಂದರ್ಭ ದೇವಾಲಯದ ಅರ್ಚಕ ಚಂದ್ರಶೇಖರ್, ಮೋಟಾರ್ ಯೂನಿಯನ್ ಉಪಾಧ್ಯಕ್ಷ ಬಾಲಕೃಷ್ಣ, ಆಟೋ ಯೂನಿಯನ್ ಅಧ್ಯಕ್ಷ ಮೋಹನ್, ಕಾರ್ಯದರ್ಶಿ ಗಂಗಾಧರ್, ನಿವೃತ್ತ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಹಾಲೇಬೇಲೂರು ನಿರ್ವಾಣಿ ಶೆಟ್ಟಿ, ಹಿಂದೂ ಜಾಗರಣಾ ವೇದಿಕೆಯ ಅಧ್ಯಕ್ಷ ಉಮೇಶ್, ಆಂಜನೇಯ ದೇವಾಲಯ ಸಮಿತಿಯ ಖಜಾಂಚಿ ರತ್ನಕುಮಾರ್, ಪ್ರಮುಖರಾದ ಎ.ಎಸ್. ಮಲ್ಲೇಶ್, ಡಾ. ಎಂ.ಪಿ. ಪುಟ್ಟಣ್ಣ, ಹಣಕೋಡು ಜಯರಾಜ್, ಯುವರಾಜ್, ಮೃತ್ಯುಂಜಯ ಸೇರಿದಂತೆ ಇತರರು ಉಪಸ್ಥಿತರಿದ್ದರು.ಗುಡ್ಡೆಹೊಸೂರು: ಇಲ್ಲಿನ ಡಾ. ಶಿವಕುಮಾರ ಸ್ವಾಮಿಯವರ ವೃತ್ತದಲ್ಲಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರೊಂದಿಗೆ ಅವರ ೧೧೪ನೇ ಹುಟ್ಟು ಹಬ್ಬವನ್ನು ಸರಳವಾಗಿ ಆಚರಿಸಲಾಯಿತು. ಈ ಸಂದರ್ಭ ಅರ್ಚಕ ಬಿ.ಎಸ್. ರಾಜಪ್ಪ ಅವರು ಸ್ವಾಮೀಜಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಗ್ರಾಮಸ್ಥರಾದ ಶುಭಶೇಖರ್, ಮುಳ್ಳುಸೋಗೆ ಮಹೇಂದ್ರ, ದಿನೇಶ್ ಗಿರೀಶ್, ನವೀನ್, ಕಾಶಿ, ಗ್ರಾ.ಪಂ. ಮಾಜಿ ಸದಸ್ಯರಾದ ಬಿ.ಟಿ. ಪ್ರಸನ್ನ ಮತ್ತು ಗ್ರಾ.ಪಂ. ಸದಸ್ಯ ನಾರಾಯಣ, ಪ್ರದೀಪ್ ಮತ್ತು ಗ್ರಾಮದ ಹಿರಿಯರಾದ ರಂಗಣ್ಣ ಮುಂತಾದವರು ಹಾಜರಿದ್ದರು. ಈ ಸಂದರ್ಭ ಕುಡೆಕ್ಕಲ್ ಗಣೇಶ್ ಸರ್ವರನ್ನು ಸ್ವಾಗತಿಸಿ, ವಂದಿಸಿದರು.