ಕುಶಾಲನಗರ,ಜೂ.೧೮: ಕುಶಾಲನಗರ ಪಟ್ಟಣ ವ್ಯಾಪ್ತಿಯಲ್ಲಿ ಮಳೆಗಾಲದ ಅವಧಿಯಲ್ಲಿ ಪ್ರವಾಹ ನಿಯಂತ್ರಣಕ್ಕೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕಾವೇರಿ ನದಿಯ ನಿರ್ವಹಣೆ ಕಾಮಗಾರಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಚಾರುಲತ ಸೋಮಲ್ ತಿಳಿಸಿದ್ದಾರೆ. ಅವರು ಹಾರಂಗಿಯಲ್ಲಿ ಪ್ರಾಕೃತಿಕ ವಿಕೋಪ ಎದುರಿಸುವ ಕುಶಾಲನಗರ,ಜೂ.೧೮: ಕುಶಾಲನಗರ ಪಟ್ಟಣ ವ್ಯಾಪ್ತಿಯಲ್ಲಿ ಮಳೆಗಾಲದ ಅವಧಿಯಲ್ಲಿ ಪ್ರವಾಹ ನಿಯಂತ್ರಣಕ್ಕೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕಾವೇರಿ ನದಿಯ ನಿರ್ವಹಣೆ ಕಾಮಗಾರಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಚಾರುಲತ ಸೋಮಲ್ ತಿಳಿಸಿದ್ದಾರೆ. ಅವರು ಹಾರಂಗಿಯಲ್ಲಿ ಪ್ರಾಕೃತಿಕ ವಿಕೋಪ ಎದುರಿಸುವ ಈಗಾಗಲೇ ಸಂಬAಧಿಸಿದ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದ್ದು, ನದಿ ತಟದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗಿದೆ. ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ಮೂಲಕ ಈ ಬಗ್ಗೆ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಮುಂದಿನ ದಿನಗಳಲ್ಲಿ ನದಿ ನಿರ್ವಹಣೆ ಕಾಮಗಾರಿ ನಿರಂತರವಾಗಿ ನಡೆಯಲಿದೆ ಎಂದರು.

ಹಾರAಗಿ ಜಲಾಶಯದಿಂದ ಹಂತ-ಹAತವಾಗಿ ನೀರನ್ನು ನದಿಗೆ ಬಿಡಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಮಳೆಗಾಲದಲ್ಲಿ ಎಲ್ಲಾ ಇಲಾಖೆ ಅಧಿಕಾರಿಗಳು ಸಮನ್ವಯತೆ ಯೊಂದಿಗೆ ಕಾರ್ಯನಿರ್ವಹಿಸುವ ಮೂಲಕ ಕಾವೇರಿ, ಹಾರಂಗಿ ನದಿ ಪ್ರವಾಹ ತಪ್ಪಿಸುವಲ್ಲಿ ಕಾರ್ಯ ಯೋಜನೆ ರೂಪಿಸಲಾಗಿದೆ ಎಂದರು. ಕೋವಿಡ್ ೩ ನೇ ಸಂಭಾವ್ಯ ಅಲೆ ಹಿನ್ನೆಲೆಯಲ್ಲಿ ಈಗಾಗಲೇ ಎಲ್ಲಾ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಈ ನಡುವೆ ಪ್ರಕೃತಿ ವಿಕೋಪ, ಸಂತ್ರಸ್ತರಿಗೆ ಕಾಳಜಿ ಕೇಂದ್ರಗಳನ್ನು ತೆರೆಯಲು ಜಿಲ್ಲೆಯ ಹಲವೆಡೆ ಸಿದ್ಧತೆ ನಡೆದಿದೆ ಎಂದರು.