ಮಡಿಕೇರಿ, ಜೂ. ೧೮: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ‘ಸಖಿ’ ಒನ್ ಸ್ಟಾಪ್ ಸೆಂಟರ್, ಘಟಕವು ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ವೈದ್ಯಕೀಯ ನೆರವು, ಪೊಲೀಸ್ ನೆರವು, ಕಾನೂನು ಸಲಹೆ, ಸಮಾಲೋಚನೆ ಸೌಲಭ್ಯ ಒದಗಿಸಲಾಗುತ್ತದೆ. ಈ ಘಟಕವು ಮಡಿಕೇರಿ ನಗರದ ಜಿಲ್ಲಾ ಆಸ್ಪತ್ರೆಯ (ಮಹಿಳಾ ಮತ್ತು ಮಕ್ಕಳ ವಿಭಾಗ) ಆವರಣದಲ್ಲಿದೆ. ಖಾಸಗಿ ಹಾಗೂ ಸಾಮಾಜಿಕ ಸ್ತರಗಳಲ್ಲಿ ಹಿಂಸಾಚಾರ ಪೀಡಿತ ಹೆಣ್ಣು ಮಕ್ಕಳು ಹಾಗೂ ಮಹಿಳೆಯರಿಗೆ ಒಂದೇ ಸೂರಿನಡಿಯಲ್ಲಿ ಸಮಗ್ರ ರೀತಿಯ ಸಹಾಯ ಮತ್ತು ಬೆಂಬಲವನ್ನು ಒದಗಿಸುವುದು. ಯಾವುದೇ ರೀತಿಯ ಮಹಿಳೆಯರ ಮೇಲಿನ ದೌರ್ಜನ್ಯ, ಕಿರುಕುಳ ಹಿಂಸಾಚಾರಗಳು/ ಸಮಸ್ಯೆಗಳಿಗೆ ಒಂದೇ ಸೂರಿನಡಿಯಲ್ಲಿ