ಮಡಿಕೇರಿ, ಜೂ. ೧೯: ರಾಜ್ಯದಲ್ಲಿ ಈಗಾಗಲೇ ಮುಂಗಾರು ಆರಂಭ ವಾಗಿದ್ದು, ಆ ದಿಸೆಯಲ್ಲಿ ಭೂ ಕುಸಿತ ಹಾಗೂ ಪ್ರವಾಹ ಎದುರಿಸಲು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸಂಬAಧಪಟ್ಟ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿರ್ದೇಶನ ನೀಡಿದರು.

ಪ್ರಾಕೃತಿಕ ವಿಕೋಪ ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತಗಳು ಕೈಗೊಂಡಿರುವ ಕ್ರಮಗಳ ಬಗ್ಗೆ ವೀಡಿಯೊ ಸಂವಾದ ಮೂಲಕ ಮಾಹಿತಿ ಪಡೆದು ಅವರು ಮಾತನಾಡಿದರು.

ರಾಜ್ಯದ ಕೆಲವು ಜಿಲ್ಲೆಗಳು ಕಳೆದ ಮೂರು ವರ್ಷಗಳಿಂದ ಒಂದಲ್ಲ ಒಂದು ರೀತಿಯಲ್ಲಿ ಪ್ರವಾಹ ಹಾಗೂ ಭೂಕುಸಿತ ಉಂಟಾಗಿ, ಸಂಕಷ್ಟ ಎದುರಿಸುತ್ತಿವೆ. ಆದ್ದರಿಂದ ಇಂತಹ ಹಾನಿಯನ್ನು ತಡೆಯಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಈಗಾಗಲೇ ನಾಲ್ಕು ಜಿಲ್ಲೆಗಳಿಗೆ ಎನ್‌ಡಿಆರ್‌ಎಫ್ ತಂಡಗಳನ್ನು ಕಳುಹಿಸಲಾಗಿದೆ. ಪ್ರಾಕೃತಿಕ ವಿಕೋಪ ಎದುರಿಸಲು ಎಲ್ಲಾ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳುವಂತೆ ನಿರ್ದೇಶನ ನೀಡಿದರು.

ಅಗತ್ಯವಿರುವೆಡೆ ಪರಿಹಾರ ಕೇಂದ್ರಗಳನ್ನು ತೆರೆದು ಸ್ಥಳಾಂತರಿಸುವುದು. ವೈದ್ಯಕೀಯ ಸವಲತ್ತು ಕಲ್ಪಿಸುವುದು, ಸಂಪನ್ಮೂಲಗಳನ್ನು ಕ್ರೋಢೀಕರಣ ಮಾಡಿಕೊಳ್ಳುವುದು ಮತ್ತಿತರ ಅಗತ್ಯ ತಯಾರಿ ಇರಬೇಕು. ಯಾವುದೇ ರೀತಿಯ ಹಾನಿ ಉಂಟಾಗದAತೆ ಮುನ್ನೆಚ್ಚರಿಕೆ ವಹಿಸುವುದು ಅತ್ಯಂತ ಅಗತ್ಯ ಎಂದು ಮುಖ್ಯಮಂತ್ರಿ ಅವರು ಒತ್ತಿ ಹೇಳಿದ್ದಾರೆ.

ಮನೆಹಾನಿಗೆ ಅನುದಾನ

ಪ್ರಾಕೃತಿಕ ವಿಕೋಪದಿಂದ ಸಂಪೂರ್ಣ ಮನೆ ಹಾನಿಯಾದಲ್ಲಿ ೫ ಲಕ್ಷ ರೂ., ಭಾಗಶಃ ಮನೆ ಹಾನಿಯಾದಲ್ಲಿ ೨ ಲಕ್ಷ ರೂ. ಹೀಗೆ ಹಂತ ಹಂತವಾಗಿ ಅನುದಾನ ಒದಗಿಸಲಾಗುವುದು. ಹಿಂದೆ ಯಾವ ಮಾನದಂಡ ಇತ್ತು ಅದರಂತೆ ಹಣ ನೀಡಲಾಗುವುದು ಎಂದು ತಿಳಿಸಿದರು.

ಪ್ರಾಕೃತಿಕ ವಿಕೋಪ ಸಂಬAಧಿಸಿ ದಂತೆ ಪ್ರವಾಹ ಹಾಗೂ ಭೂಕುಸಿತ ಪ್ರದೇಶಗಳನ್ನು ಗುರುತಿಸಿ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಹಣಕಾಸಿನ ತೊಂದರೆಯಿಲ್ಲ. ಆದರೆ ಇರುವ ಹಣವನ್ನು ಬಳಸಬೇಕು. ಮುಂದೆ ಮತ್ತಷ್ಟು ಹಣ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಅವರು ಪ್ರಕಟಿಸಿದರು.

ಶಾಶ್ವತ ಯೋಜನೆ ರೂಪಿಸಲು ಸೋಮಣ್ಣ ಮನವಿ

ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಮಾತನಾಡಿ, ಕಳೆದ ಮೂರು ವರ್ಷಗಳಿಂದ ಕೊಡಗು ಜಿಲ್ಲೆಯಲ್ಲಿ ಭೂಕುಸಿತ ಹಾಗೂ ಪ್ರವಾಹದಿಂದಾಗಿ ಜನಜೀವನ ತತ್ತರಿಸಿದೆ. ಆದ್ದರಿಂದ ಶಾಶ್ವತ ಕಾರ್ಯಕ್ರಮಗಳನ್ನು ರೂಪಿಸಬೇಕಿದೆ ಎಂದು ಮುಖ್ಯಮಂತ್ರಿ ಅವರ ಗಮನ ಸೆಳೆದರು.

ಕಳೆದ ಮೂರು ವರ್ಷಗಳಲ್ಲಿ ತಲಕಾವೇರಿ, ಭಾಗಮಂಡಲ, ತೋರ, ಹಾಗೆಯೇ ಮಡಿಕೇರಿ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಭೂ ಕುಸಿತದಿಂದ ಜನ ಜಾನುವಾರು, ಬೆಳೆ ಹಾನಿ ಉಂಟಾಗಿ ತುಂಬಾ ತೊಂದರೆ ಅನುಭವಿಸಿದ್ದಾರೆ. ಆ ನಿಟ್ಟಿನಲ್ಲಿ ಜಿಲ್ಲಾಡಳಿತ ಪ್ರಾಕೃತಿಕ ವಿಕೋಪ ಎದುರಿಸಲು ಅಗತ್ಯ ಸಿದ್ಧತೆ ಮಾಡಿಕೊಂಡಿದೆ ಎಂದು ವಿ.ಸೋಮಣ್ಣ ತಿಳಿಸಿದರು.

ಕಿತ್ತಳೆ ಬೆಳೆಗೆ ಪ್ರೋತ್ಸಾಹ ನೀಡಿ

ಕೊಡಗಿನ ಕಿತ್ತಳೆಗೆ ತನ್ನದೇ ಆದ ಇತಿಹಾಸವಿದ್ದು, ಕೊಡಗಿನಲ್ಲಿ ಬೆಳೆಯುವ ಕಿತ್ತಳೆ ಬೆಳೆಗೆ ಹೆಚ್ಚಿನ ಪ್ರೋತ್ಸಾಹ ನೀಡುವಂತೆ ಮುಖ್ಯಮಂತ್ರಿ ಅವರಲ್ಲಿ ವಿ.ಸೋಮಣ್ಣ ಮನವಿ ಮಾಡಿದರು.

ಇದಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೊಡಗಿನ ಕಿತ್ತಳೆಯನ್ನು ತೆಗೆದುಕೊಂಡು ಬರುವಂತೆ ಹಾಸ್ಯ ಚಟಾಕಿ ಹಾರಿಸಿದರು.

ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಮಾಹಿತಿ ನೀಡಿ ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ಎದುರಿಸುವಲ್ಲಿ ಜಿಲ್ಲಾಡಳಿತ ಅಗತ್ಯ ಮುನ್ನೆಚ್ಚರಿಕ ಕ್ರಮಗಳನ್ನು ಕೈಗೊಂಡಿದೆ. ಆ ದಿಸೆಯಲ್ಲಿ ಜಿಲ್ಲೆಯ ೭೨ ಸೂಕ್ಷö್ಮ ಪ್ರದೇಶಗಳನ್ನು ಗುರುತಿಸಲಾಗಿದೆ ಎಂದರು.

ಸೂಕ್ಷö್ಮ ಪ್ರದೇಶಗಳಲ್ಲಿನ ಕುಟುಂಬಗಳನ್ನು ಪರಿಹಾರ ಕೇಂದ್ರಕ್ಕೆ ಸ್ಥಳಾಂತರಿಸುವುದು. ಜಾನುವಾರುಗಳನ್ನು ಗೋಶಾಲೆಗೆ ಸ್ಥಳಾಂತರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಅವರು ಮಾಹಿತಿ ನೀಡಿದರು.

ಈಗಾಗಲೇ ಎನ್‌ಡಿಆರ್‌ಎಫ್ ತಂಡವು ಜಿಲ್ಲೆಯ ಸೂಕ್ಷö್ಮ ಪ್ರದೇಶಗಳಿಗೆ ಭೇಟಿ ನೀಡಿ ಅಧ್ಯಯನ ಮಾಡಿದೆ. ಜೊತೆಗೆ ಜಿಲ್ಲಾಡಳಿತದಿಂದ ಪ್ರಾಕೃತಿಕ ವಿಕೋಪವನ್ನು ಎದುರಿಸುವ ಪ್ರಾತ್ಯಕ್ಷಿಕೆ ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಮಾಹಿತಿ ನೀಡಿದರು.

ವೀಡಿಯೊ ಸಂವಾದದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ಉಪ ವಿಭಾಗಾಧಿಕಾರಿ ಈಶ್ವರ್ ಕುಮಾರ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನಾ ಎಂ.ಶೇಖ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ನಟರಾಜು, ಶಿರಸ್ತೇದಾರ್ ಪ್ರಕಾಶ್, ಅನನ್ಯ ವಾಸುದೇವ ಇತರರು ಇದ್ದರು.