ಮಡಿಕೇರಿ, ಜೂ. ೧೯: ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮುಂಚೂಣಿ ಘಟಕಗಳ ಹಾಗೂ ವಿವಿಧ ಘಟಕಗಳ ಅಧ್ಯಕ್ಷರುಗಳ ಮತ್ತು ಜಿಲ್ಲಾ ವಕ್ತಾರರುಗಳ ಸಭೆ ತಾ. ೧೮ ರಂದು ಜಿಲ್ಲಾ ಕಾಂಗ್ರೆಸ್ ಕಚೇರಿ ಮಡಿಕೇರಿಯಲ್ಲಿ ನಡೆಯಿತು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪರವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಕೆಪಿಸಿಸಿ ಮೈಸೂರು ವಿಭಾಗದ ಮಾಧ್ಯಮ ಸಂಚಾಲಕ ರಾಜುಗೌಡ ಭಾಗವಹಿಸಿದ್ದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಧರ್ಮಜ ಉತ್ತಪ್ಪ ಅವರು ಪಕ್ಷ ಸಂಘಟನೆಗೆ ಒತ್ತು ನೀಡಿದರಲ್ಲದೆ, ಎಲ್ಲಾ ಘಟಕಗಳು ಸಂಪೂರ್ಣವಾಗಿ ಪಕ್ಷ ಸಂಘಟನೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂಬ ಕರೆಯನ್ನು ನೀಡಿದರು.

ರಾಜುಗೌಡ ಮಾತನಾಡಿ, ಪಕ್ಷ ಸಂಘಟಿಸುವ ನಿಟ್ಟಿನಲ್ಲಿ ಕೆಪಿಸಿಸಿ ಸಂದೇಶವನ್ನು ಜಿಲ್ಲಾ ಘಟಕಗಳ ಅಧ್ಯಕ್ಷರುಗಳಿಗೆ ಮತ್ತು ವಕ್ತಾರರಿಗೆ ವಿವರಿಸಿದರು.

ಪಿ.ಎಂ. ಶಾಹಿದ್ ಮಾತನಾಡಿ, ಈ ಹಿಂದೆ ನಡೆದಂತಹ ತಪ್ಪುಗಳು ಪುನರಾವರ್ತಿಸದಂತೆ ಪಕ್ಷ ಸಂಘಟನೆಯಲ್ಲಿ ಎಲ್ಲರೂ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು. ವೇದಿಕೆಯಲ್ಲಿ ನಾಗಮಂಗಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಉಪಸ್ಥಿತರಿದ್ದರು.

ಸಭೆಯಲ್ಲಿ ಜಿಲ್ಲಾ ವಕ್ತಾರರುಗಳಾದ ಟಾಟು ಮೊಣ್ಣಪ್ಪ, ಸರಿತಾ ಪೂಣಚ್ಚ ಹಾಗೂ ಟಿ.ಈ. ಸುರೇಶ್, ಸೇವಾದಳದ ಜಿಲ್ಲಾಧ್ಯಕ್ಷ ಚಿಳುವಂಡ ಕಾವೇರಪ್ಪ, ಯುವ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷ ಹನೀಫ್ ಸಂಪಾಜೆ, ಐ.ಎನ್.ಟಿ. ಯು.ಸಿ. ಜಿಲ್ಲಾ ಅಧ್ಯಕ್ಷ ಗೋವಿಂದರಾಜ ದಾಸ್, ಸಾಮಾಜಿಕ ಜಾಲತಾಣ ಜಿಲ್ಲಾಧ್ಯಕ್ಷ ಸೂರಜ್ ಹೊಸೂರು, ಕಿಸಾನ್ ಘಟಕದ ಜಿಲ್ಲಾಧ್ಯಕ್ಷ ನೆರವಂಡ ಉಮೇಶ್, ಆರ್.ಜಿ.ಪಿ.ಆರ್.ಎಸ್. ಜಿಲ್ಲಾಧ್ಯಕ್ಷ ತೆನ್ನೀರ ಮೈನಾ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಉಸ್ಮಾನ್, ಅಸಂಘಟಿತ ಕಾರ್ಮಿಕ ಘಟಕದ ಅಧ್ಯಕ್ಷ ನರೇಂದ್ರ ಕಾಮತ್, ಎಸ್‌ಸಿ ಘಟಕದ ಜಿಲ್ಲಾಧ್ಯಕ್ಷ ಸತೀಶ್, ಕಾನೂನು ಘಟಕದ ಜಿಲ್ಲಾಧ್ಯಕ್ಷ ಶ್ರೀಧರನ್ ನಾಯರ್, ವೃತ್ತಿಪರ ಘಟಕ ಜಿಲ್ಲಾಧ್ಯಕ್ಷ ಅಂಬೆಕಲ್ಲು ನವೀನ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಕೆ.ಎಂ. ಬಾಲಕೃಷ್ಣ, ಮುಕ್ಕಾಟಿರ ಸಂದೀಪ್ ಹಾಗೂ ಇತರರು ಉಪಸ್ಥಿತರಿದ್ದರು.

ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಪಿ. ಸುರೇಶ್ ಸ್ವಾಗತಿಸಿ, ಧರ್ಮಜ ಉತ್ತಪ್ಪ ವಂದಿಸಿದರು.