ಮಡಿಕೇರಿ, ಜೂ. ೧೯: ನಗರದ ಪ್ರಧಾನ ಅಂಚೆ ಕಚೇರಿ ಸಮೀಪವಿರುವ ತೋಟಗಾರಿಕಾ ಇಲಾಖೆಯ ಹಾಪ್‌ಕಾಮ್ಸ್ ಕಟ್ಟಡದ ಬಳಿ ಭೂಕುಸಿತ ಸಂಭವಿಸಿದ ಘಟನೆಗೆ ಸಂಬAಧಿಸಿದAತೆ ಕಟ್ಟಡ ಕಾಮಗಾರಿ ನಡೆಸುತ್ತಿರುವ ಮರ್ಕರ ಗ್ರೂಪ್ ಸಂಸ್ಥೆಯ ಪರವಾನಗಿಯನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ.

ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಹಾಗೂ ನಗರಸಭೆ ವತಿಯಿಂದ ಜಂಟಿಯಾಗಿ ಸ್ಥಳ ಪರಿಶೀಲಿಸಿದ ಬಳಿಕ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಪರವಾನಗಿಯನ್ನು ತಾತ್ಕಾಲಿಕವಾಗಿ ರದ್ದು ಗೊಳಿಸಲಾಗಿದ್ದು, ಅಲ್ಲಿ ತಡೆಗೋಡೆ ನಿರ್ಮಾಣ ಮಾಡಿದ ನಂತರ ಕಟ್ಟಡ ಕಾಮಗಾರಿ ಕೈಗೊಳ್ಳಲು ಆದೇಶ ಪಡೆಯುವಂತೆ ಸೂಚಿಸಿ ಪರವಾನಗಿಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ ಎಂದು ನಗರಸಭಾ ಆಯುಕ್ತ ರಾಮದಾಸ್ ಮಾಹಿತಿ ನೀಡಿದ್ದಾರೆ. ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರಲ್ಲದೆ, ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.