ಮಡಿಕೇರಿ, ಆ. ೨೪: ಯುವ ಸಮೂಹಕ್ಕೆ ಕಾಂಗ್ರೆಸ್ ನಾಯಕರು ದೇಶಕ್ಕಾಗಿ ನೀಡಿದ ಕೊಡುಗೆಯನ್ನು ಅರ್ಥೈಸುವ ಅಗತ್ಯತೆ ಇದೆ ಎಂದು ಕಾಂಗ್ರೆಸ್ ರಾಷ್ಟಿçÃಯ ಮುಖಂಡರು, ಕರ್ನಾಟಕ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಇಂಗಿತ ವ್ಯಕ್ತಪಡಿಸಿದರು.
ಕೊಡಗು ಜಿಲ್ಲಾ ಕಾಂಗ್ರೆಸ್ ರಾಜೀವ್ಗಾಂಧಿ ಪಂಚಾಯತ್ ರಾಜ್ ಸಂಘಟನೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರತಿನಿಧಿಗಳ ಸಭೆಯ ಸಂವಾದದಲ್ಲಿ ಭಾಗವಹಿಸಿದ್ದ ಅವರು, ಶಿಕ್ಷಣ, ಆರೋಗ್ಯ, ಕೃಷಿ, ಮಾಹಿತಿ ತಂತ್ರಜ್ಞಾನ, ವಿಜ್ಞಾನ ಹೀಗೆ ಹಲವು ಕ್ಷೇತ್ರಗಳಲ್ಲಿ ಭಾರತವು ಅಭೂತಪೂರ್ವ ಸಾಧನೆ ಮಾಡಲು ಕಾಂಗ್ರೆಸ್ ನಾಯಕರುಗಳ ಕೊಡುಗೆಯೇ ಮುಖ್ಯ ಕಾರಣವಾಗಿದ್ದು, ಯುವ ಜನತೆಗೆ ಅದನ್ನು ಅರ್ಥ ಮಾಡಿಸುವ ಕಾರ್ಯ ಕಾಂಗ್ರೆಸ್ನಿAದ ಆಗಬೇಕಿದೆ ಎಂದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಪಕ್ಷದ ಚಟುವಟಿಕೆಗಳು ಮತ್ತು ಮುಂಬರುವ ದಿನಗಳಲ್ಲಿ ಜಿಲ್ಲಾ ಕಾಂಗ್ರೆಸ್ ಪಕ್ಷ ಸಂಘಟನೆಗೆ ಅಳವಡಿಸಿಕೊಂಡಿರುವ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು.
ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ರಾಜ್ಯಾಧ್ಯಕ್ಷ ಸಿ. ನಾರಾಯಣ ಸ್ವಾಮಿ, ರಾಜ್ಯ ಸಂಚಾಲಕ ಹಾಗೂ ವಿಧಾನ ಪರಿಷತ್ ಸದಸ್ಯ ವಿಜಯ್ ಸಿಂಗ್, ರಾಷ್ಟಿçÃಯ ಸಲಹೆಗಾರರಾದ ಬಿ.ವೈ. ಘೋರ್ಪಡೆ, ಅಖಿಲ ಭಾರತ ರಾಷ್ಟಿçÃಯ ಕಾಂಗ್ರೆಸ್ ಕಾರ್ಯದರ್ಶಿ ಬಿ.ಎಂ. ಸಂದೀಪ್, ಮಾಜಿ ಎಂ.ಎಲ್.ಸಿ. ಅರುಣ್ ಮಾಚಯ್ಯ, ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನೀರಾ ಮೈನಾ, ಕೊಡಗು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರುಗಳಾದ ಕೆ.ಪಿ. ಚಂದ್ರಕಲಾ, ದೀರ್ಘಕೇಶಿ ಶಿವಣ್ಣ, ರಾಜಾರಾವ್, ಕೆಪಿಸಿಸಿ ಮುಖಂಡರಾದ ನಟೇಶ್ ಗೌಡ, ಟಿ.ಎಂ. ಶಾಹಿದ್ ಸೇರಿದಂತೆ ಇನ್ನಿತರರು ಹಾಜರಿದ್ದರು.