ಕೂಡಿಗೆ, ಆ. ೨೪: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡಗೊಟ್ಟ ಗ್ರಾಮದ ದಿಡ್ಡಳ್ಳಿ ಪುನರ್ವಸತಿ ಕೇಂದ್ರದಲ್ಲಿ ಈಗಾಗಲೇ ೩೫೪ ಮನೆಗಳ ನಿರ್ಮಾಣವಾಗಿ ಎರಡು ವರ್ಷಗಳು ಕಳೆದು ಫಲಾನುಭವಿಗಳಿಗೆ ಮನೆಗಳ ಹಸ್ತಾಂತರ ಮಾಡಲಾಗಿತ್ತು. ಅದರೆ ಆಯಾ ಮನೆಗಳಲ್ಲಿ ಅರ್ಹ ಫಲಾನುಭವಿಗಳು ವಾಸವಿಲ್ಲದೆ, ಬೇರೆಯವರು ವಾಸಿಸುತ್ತಿರುವುದು ಕಂಡುಬAದ ಹಿನ್ನೆಲೆಯಲ್ಲಿ ಸಂಬAಧಿಸಿದ ಇಲಾಖೆ ವತಿಯಿಂದ ನೋಟೀಸ್ ನೀಡಲಾಗಿದೆ.

ಬ್ಯಾಡಗೊಟ್ಟ ಪುನರ್ವಸತಿ ಕೇಂದ್ರದ ೪೬ ಮನೆಗಳು ಖಾಲಿ ಇದ್ದು, ಅವುಗಳಲ್ಲಿ ೧೬ ಮನೆಗಳಲ್ಲಿ ರಾಜೀವ್ ಗಾಂಧಿ ವಸತಿ ನಿಗಮ ಪಟ್ಟಿಯಲ್ಲಿ ಹೆಸರು ಇಲ್ಲದವರು ಬಂದು ವಾಸಿಸುತ್ತಿದ್ದಾರೆ ಎಂದು ಹಾಡಿಯವರ ಹೇಳಿಕೆಯ ಮೇರೆಗೆ ತಾಲೂಕು ಸಮಾಜ ಕಲ್ಯಾಣ ಇಲಾಖೆ ಮತ್ತು ಕೂಡಿಗೆ ಗ್ರಾಮ ಪಂಚಾಯಿತಿ ವತಿಯಿಂದ ಮನೆಗಳ ಸರ್ವೆ ಮತ್ತು ಸಮೀಕ್ಷೆ ಕಾರ್ಯ ನಡೆದಿತ್ತು. ಶಾಸಕರ ಮತ್ತು ಅಧಿಕಾರಿಗಳ ಸೂಚನೆಯಂತೆ ಅನಧಿಕೃತವಾಗಿ ವಾಸಿಸುತ್ತಿದ್ದ ೧೬ ಕುಟುಂಬದವರಿಗೆ ತಾಲೂಕು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಒಂದು ವಾರದ ಒಳಗೆ ತೆರವುಗೊಳಿಸುವಂತೆ ನೋಟೀಸ್ ನೀಡಲಾಗಿದೆ.